alex Certify
ಕನ್ನಡ ದುನಿಯಾ       Mobile App
       

Kannada Duniya

ದೇವೇಗೌಡರ ಹೊಸ ತಲೆಮಾರಿಗೆ ಪಕ್ಷ ಸಂಘಟನೆ ಹೊಣೆ

ಜೆಡಿಎಸ್ ಪಕ್ಷದಲ್ಲಿ ಮಹತ್ವದ ಬದಲಾವಣೆಯಾಗ್ತಿದೆ. ಹೆಚ್ ಡಿ ದೇವೇಗೌಡರ ಕುಟುಂಬ ಹೊಸ ತಲೆಮಾರಿಗೆ ಪಕ್ಷದ ಹೊಣೆ ನೀಡ್ತಾಯಿದೆ. ಸಹೋದರರಿಬ್ಬರು ಪಕ್ಷ ಸಂಘಟನೆ ಹೊಣೆ ಹೊರಲಿದ್ದಾರೆ ಎನ್ನಲಾಗ್ತಿದೆ.

ಮಾಧ್ಯಮದಲ್ಲಿ ಪ್ರಸಾರವಾದ ವರದಿ ಪ್ರಕಾರ ಜಾಗ್ವಾರ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿರುವ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶಕ್ಕೆ ಮುಂದಾಗಿದ್ದಾರೆ. ಜೆಡಿಎಸ್ ಪಕ್ಷ ಸಂಘಟನೆ ಹಾಗೂ ಪ್ರಚಾರದ ಹೊಣೆ ಹೊರಲಿದ್ದಾರೆ. ತಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಖಿಲ್ ಈ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ‘

ದೀಪಾವಳಿ ನಂತ್ರ ನಿಖಿಲ್ ಕುಮಾರಸ್ವಾಮಿ ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದಾರೆ. ಮೈಸೂರು, ಚಾಮರಾಜನಗರದಲ್ಲಿ ನಿಖಿಲ್ ಪ್ರಚಾರ ಕಾರ್ಯ ನಡೆಸಲಿದ್ದಾರೆ. ರಾಮನಗರ, ಮಂಡ್ಯದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನವೇ ತಂದೆಗಿಂತ ಮೊದಲೇ ನಿಖಿಲ್ ಕುಮಾರಸ್ವಾಮಿ ಪ್ರಚಾರದ ಕಣಕ್ಕಿಳಿಯಲಿದ್ದಾರೆ.

ಈಗಾಗಲೇ ರಾಜಕೀಯದಲ್ಲಿ ಸಕ್ರಿಯರಾಗಿರುವ  ಪ್ರಜ್ವಲ್ ರೇವಣ್ಣ ಕೂಡ ಪ್ರಚಾರ ಹಾಗೂ ಪಕ್ಷ ಸಂಘಟನೆ ಹೊಣೆ ಹೊರಲಿದ್ದಾರೆ ಎನ್ನಲಾಗಿದೆ. ಇಬ್ಬರೂ ದೀಪಾವಳಿ ನಂತ್ರ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...