alex Certify
ಕನ್ನಡ ದುನಿಯಾ       Mobile App
       

Kannada Duniya

‘ಬಿ.ಜೆ.ಪಿ. –ಕಾಂಗ್ರೆಸ್ ವಿರುದ್ಧ ಏಕಾಂಗಿ ಹೋರಾಟ’

ತುಮಕೂರು: ಬಿ.ಜೆ.ಪಿ. ಹಾಗೂ ಕಾಂಗ್ರೆಸ್ ಪಕ್ಷಗಳ ವಿರುದ್ಧ ಏಕಾಂಗಿ ಹೋರಾಟ ನಡೆಸುತ್ತಿದ್ದೇನೆ ಎಂದು ಜೆ.ಡಿ.ಎಸ್. ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಆಯೋಜಿಸಿದ್ದ ವಿಕಾಸಪರ್ವ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಬಿ.ಜೆ.ಪಿ. ಮುಷ್ಠಿ ಅಕ್ಕಿ ಅಭಿಯಾನ ನಡೆಸುವ ಮೂಲಕ ರೈತರ ವಂಚಿಸುತ್ತಿದೆ. ಎರಡು ಪಕ್ಷಗಳ ವಿರುದ್ಧ ನನ್ನ ಏಕಾಂಗಿ ಹೋರಾಟ ಮುಖ್ಯಮಂತ್ರಿಯಾಗಲು ಅಲ್ಲ, ರೈತರ ಆತ್ಮಹತ್ಯೆಯನ್ನು ತಡೆಯುವ ಉದ್ದೇಶದಿಂದ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರತಿದಿನ ಒಂದಲ್ಲ ಒಂದು ಭಾಗದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಆತ್ಮಹತ್ಯೆ ತಡೆಗೆ ಜೆ.ಡಿ.ಎಸ್. ಅಧಿಕಾರಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.

ಪಕ್ಷ ಅಧಿಕಾರಕ್ಕೆ ಬಂದರೆ, ಸ್ವಾಭಿಮಾನದ ಬದುಕು ಕಟ್ಟಿಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...