alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ರಚನೆಗೆ ಹೆಚ್.ಡಿ.ಕೆ.ಗೆ ರಾಜ್ಯಪಾಲರ ಬುಲಾವ್

ಮೂರು ದಿನಗಳ ಹಿಂದಷ್ಟೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ, ತಮಗೆ ಸದನದಲ್ಲಿ ಅಗತ್ಯ ಬಹುಮತ ಸಿಗುವುದಿಲ್ಲವೆಂಬುದನ್ನು ಮನಗಂಡು ವಿಶ್ವಾಸಮತ ಯಾಚನೆ ಮಾಡುವ ಗೋಜಿಗೆ ಹೋಗದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರಕ್ಕೇರುವ ಸಾಧ್ಯತೆ ನಿಚ್ಚಳವಾಗಿದ್ದು, ಈ ಹಿಂದೆ ಜೆಡಿಎಸ್-ಕಾಂಗ್ರೆಸ್ ಸಲ್ಲಿಸಿದ್ದ ಪತ್ರದ ಆಧಾರದ ಮೇಲೆ ರಾಜ್ಯಪಾಲ ವಜೂಭಾಯ್ ವಾಲಾ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರನ್ನು ಆಹ್ವಾನಿಸಿದ್ದಾರೆಂದು ತಿಳಿದುಬಂದಿದೆ.

ಸಂಜೆ 7-30 ರ ಸುಮಾರಿಗೆ ರಾಜಭವನಕ್ಕೆ ಭೇಟಿ ನೀಡಲಿರುವ ಹೆಚ್.ಡಿ. ಕುಮಾರಸ್ವಾಮಿ, ತಮಗಿರುವ ಶಾಸಕರ ಬೆಂಬಲದ ಮಾಹಿತಿ ನೀಡಲಿದ್ದಾರಲ್ಲದೇ ಪ್ರಮಾಣವಚನ ಸ್ವೀಕರಿಸುವ ದಿನಾಂಕ ಹಾಗೂ ಸಮಯವನ್ನು ರಾಜ್ಯಪಾಲರಿಗೆ ತಿಳಿಸಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...