alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಟಿಕೆಟ್ ಫೈಟ್, ಕಾರ್ಯಕರ್ತರ ವಿರುದ್ಧ ಗೌಡರ ಆಕ್ರೋಶ

ರಾಮನಗರ: ಮುಂದಿನ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಜೆ.ಡಿ.ಎಸ್. ನಲ್ಲಿ ಟಿಕೆಟ್ ಗಾಗಿ ಭಾರೀ ಪೈಪೋಟಿ, ಕಲಹ ಶುರುವಾಗಿದೆ.

ರಾಮನಗರ ಸಮೀಪದ ಬಿಡದಿಯಲ್ಲಿ ನಡೆಯುತ್ತಿದ್ದ ಪಕ್ಷದ ಸಮಾವೇಶದಲ್ಲಿ ಕನಕಪುರ ಕ್ಷೇತ್ರದ ಟಿಕೆಟ್ ವಿಚಾರವಾಗಿ ಕಬ್ಬಾಳಯ್ಯ ಮತ್ತು ಡಿ.ಎಂ. ವಿಶ್ವನಾಥ್ ಅವರ ಬೆಂಬಲಿಗರು ಗಲಾಟೆ ನಡೆಸಿದ್ದು, ಜೆ.ಡಿ.ಎಸ್. ವರಿಷ್ಠರಾದ ಹೆಚ್.ಡಿ. ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರ ಮತ್ತು ಚನ್ನಪಟ್ಟಣದ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚಿಸಲು ಬಿಡದಿಯ ರೆಸಾರ್ಟ್ ನಲ್ಲಿ ಸಭೆ ಕರೆಯಲಾಗಿದೆ. ಸಭೆಯ ಆರಂಭದಲ್ಲಿಯೇ ಡಿ.ಎಂ. ವಿಶ್ವನಾಥ್ ಬೆಂಬಲಿಗರು ಟಿಕೆಟ್ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಕಬ್ಬಾಳಯ್ಯ ಬೆಂಬಲಿಗರೂ ಟಿಕೆಟ್ ಕೊಡಬೇಕೆಂದು ಪಟ್ಟು ಹಿಡಿದಿದ್ದು, ವೇದಿಕೆಯ ಬಳಿ ಬಂದು ಗಲಾಟೆ ನಡೆಸಿದ್ದಾರೆ.

ಇಬ್ಬರ ಬೆಂಬಲಿಗರ ನಡುವೆ ವಾಗ್ವಾದ ನಡೆದಿದ್ದು, ಇದಕ್ಕೆ ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿಯೇ ಒಗ್ಗಟ್ಟು ಇಲ್ಲದಿದ್ದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಕಾರ್ಯಕರ್ತರ ಗಲಾಟೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...