alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ.ಗೆ ಹೃದಯ ಚಿಕಿತ್ಸೆ ಯಶಸ್ವಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದೆ.

ಬನ್ನೇರುಘಟ್ಟ ರಸ್ತೆಯ ಅಪೊಲೊ ಆಸ್ಪತ್ರೆಯಲ್ಲಿ ಡಾ. ಸತ್ಯಕಿ ನೇತೃತ್ವದ ವೈದ್ಯರ ತಂಡ 45 ನಿಮಿಷಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಯಶಸ್ವಿಯಾಗಿ ಹೃದಯನಾಳದ ವಾಲ್ವ್ ಬದಲಾವಣೆ ಮಾಡಲಾಗಿದೆ.

10 ವರ್ಷಗಳ ಹಿಂದೆ ಕುಮಾರಸ್ವಾಮಿ ಅವರಿಗೆ ಟಿಶ್ಯೂ ವಾಲ್ವ್ ಅಳವಡಿಸಲಾಗಿದ್ದು, ಧೂಳಿನ ಅಲರ್ಜಿ, ಕಫದ ಸಮಸ್ಯೆಯಿಂದಾಗಿ ಹೃದಯ ಕವಾಟದ ಮೇಲೆ ಒತ್ತಡ ಹೆಚ್ಚಾಗಿದೆ. ಹಾಗಾಗಿ ಹಳೆಯ ವಾಲ್ವ್ ಬದಲಿಸಿ ಹೊಸ ವಾಲ್ವ್ ಅಳವಡಿಸಲಾಗಿದೆ.

ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದ್ದು, ಸೆಪ್ಟಂಬರ್ 26 ರಂದು ಕುಮಾರಸ್ವಾಮಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೂರವಾಣಿ ಮೂಲಕ ಹೆಚ್.ಡಿ.ಕೆ. ಆರೋಗ್ಯ ವಿಚಾರಿಸಿದ್ದಾರೆ.

ಕುಮಾರಸ್ವಾಮಿ ಹೆಸರಲ್ಲಿ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರು, ಅವರ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...