alex Certify
ಕನ್ನಡ ದುನಿಯಾ       Mobile App
       

Kannada Duniya

ವಿಜಯಪುರದಲ್ಲಿ ಹೆಚ್.ಡಿ.ಕೆ. ಭರ್ಜರಿ ಪ್ರಚಾರ

ಜೆ.ಡಿ.ಎಸ್. ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ವಿಜಯಪುರ ಜಿಲ್ಲೆಯ ಚಡಚಣ, ಸಿಂದಗಿ, ಹಿಪ್ಪರಗಿ, ಇಂಡಿ ಮೊದಲಾದ ಕಡೆಗಳಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಪ್ರಚಾರದ ವೇಳೆ ಮಾತನಾಡಿದ ಹೆಚ್.ಡಿ.ಕೆ., ಈ ಸಲ ಕಪ್ ನಮ್ದೇ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಅತಂತ್ರ ಫಲಿತಾಂಶ ಬರುವುದಿಲ್ಲ. ಜೆ.ಡಿ.ಎಸ್. ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಪಕ್ಷ ಕಾಂಗ್ರೆಸ್ ಪರವಾಗಿಯೂ ಇಲ್ಲ, ಬಿ.ಜೆ.ಪಿ. ಪರವಾಗಿಯೂ ಇಲ್ಲ. ನಾವು 113 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬರಲು ಆಶೀರ್ವಾದ ಮಾಡಿ. ನನಗೊಮ್ಮೆ ಅಧಿಕಾರ ಕೊಟ್ಟು ನೋಡಿ. 6 ತಿಂಗಳಲ್ಲಿ 24 ಗಂಟೆ ವಿದ್ಯುತ್ ಕೊಡುತ್ತೇನೆ. ವಿಧಾನಸೌಧದಲ್ಲಿ ಕುಳಿತು ಆಡಳಿತ ನಡೆಸಲ್ಲ, ಜನರ ಬಳಿಗೆ ಬಂದು ಸಮಸ್ಯೆ ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...