alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಗೆ ಭಿನ್ನಮತೀಯರ ಗೈರು

hd-kumaraswamy_2357ರಾಜ್ಯ ಸಭೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಹೆಚ್.ಡಿ. ಕುಮಾರಸ್ವಾಮಿಯವರ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಗೆ ಭಿನ್ನಮತೀಯ ಶಾಸಕರೆಂದು ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಖಾನ್, ಇಕ್ಬಾಲ್ ಅನ್ಸಾರಿ, ಬಾಲಕೃಷ್ಣ, ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಚೆಲುವರಾಯ ಸ್ವಾಮಿ ಗೈರು ಹಾಜರಾಗಿದ್ದಾರೆನ್ನಲಾಗಿದೆ.

ಸಭೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯಸಭೆಗೆ ಜೆಡಿಎಸ್ ನಿಂದ ಬಿ.ಎ. ಫಾರೂಕ್ ಕಣಕ್ಕಿಳಿಯಲಿದ್ದಾರೆಂದು ತಿಳಿಸಿದರಲ್ಲದೇ ಯಾರು, ಯಾರಿಗೆ ಮತದಾನ ಮಾಡಲಿದ್ದಾರೆಂಬುದು ಚುನಾವಣೆ ದಿನ ತಿಳಿಯಲಿದೆ ಎಂದರು.

ವಿಧಾನಪರಿಷತ್ ಗೆ ಎರಡನೇ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದ್ದು, ಬಿಜೆಪಿಯ ಹೆಚ್ಚುವರಿ ಮತಗಳನ್ನು ಜೆಡಿಎಸ್ ಅಭ್ಯರ್ಥಿಗೆ ನೀಡುವಂತೆ ಕೋರಲಾಗುವುದು ಎಂದು ಹೇಳಲಾಗಿದೆ. ಮುಂಬರುವ ಬೆಂಗಳೂರು ಮೇಯರ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯನ್ನು ಬೆಂಬಲಿಸಲಿದೆ ಎನ್ನಲಾಗಿದ್ದು, ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಗೆ ಬೆಂಬಲ ನೀಡುವ ಕುರಿತು ಕುಮಾರಸ್ವಾಮಿ, ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...