alex Certify
ಕನ್ನಡ ದುನಿಯಾ       Mobile App
       

Kannada Duniya

ಗೌಡರ ತವರೂರಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿರುವುದರ ಮಧ್ಯೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ತವರು ಹಾಸನ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶಾಸಕಾಂಗದ ಪಕ್ಷದ ಸಭೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ಚಿತ್ತ ಈಗ ಹಾಸನದತ್ತ ನೆಟ್ಟಿದೆ.

ಇಂದು ಸಂಜೆ 5 ಗಂಟೆಗೆ ಹಾಸನದ ಬೇಲೂರು ರಸ್ತೆಯಲ್ಲಿರುವ ಹೊಯ್ಸಳ ವಿಲೇಜ್ ರೆಸಾರ್ಟ್ ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಇದಕ್ಕಾಗಿ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಮೈತ್ರಿಕೂಟ ಸರ್ಕಾರವನ್ನು ಪತನಗೊಳಿಸಲು ಯತ್ನಿಸುತ್ತಿರುವ ಬಿಜೆಪಿ, ಕೆಲ ಜೆಡಿಎಸ್ ಶಾಸಕರನ್ನು ಸೆಳೆಯಲು ಮುಂದಾಗಿದೆ ಎಂಬ ಹಿನ್ನೆಲೆಯಲ್ಲಿ ಇಂದಿನ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಮಹತ್ವ ಪಡೆದುಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...