alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ಸಮಾವೇಶ: 7 ಗಂಟೆಗಳ ಕಾಲ ಹೆದ್ದಾರಿ ಬಂದ್

ಮಂಡ್ಯ ನಗರದ ಸರ್ ಎಂ.ವಿ. ಕ್ರೀಡಾಂಗಣದಲ್ಲಿ ಜೆಡಿಎಸ್ ಕೃತಜ್ಞತಾ ಸಮಾವೇಶ ಆಯೋಜಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪಾಲ್ಗೊಂಡಿದ್ದಾರೆ. ಸಮಾವೇಶದ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಸಮಾವೇಶದಲ್ಲಿ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆಯಿಂದ ಮಂಡ್ಯ ಜಿಲ್ಲಾಧಿಕಾರಿ ಎನ್.ಮಂಜುಶ್ರಿಯವರು ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9ರ ವರೆಗೆ ಹೆದ್ದಾರಿಯನ್ನು ಬಂದ್ ಮಾಡಲು ಅದೇಶಿಸಿದ್ದಾರೆ.

ಈ ಕಾರಣದಿಂದ  ಬೆಂಗಳೂರಿಂದ ಮೈಸೂರು ಕಡೆ ಹೋಗುವ ವಾಹನಗಳು ಮದ್ದೂರಿನ ಟಿ.ಬಿ. ಕ್ರಾಸ್ ಮಳವಳ್ಳಿ ಮಾರ್ಗದಲ್ಲಿ ಸಂಚರಿಸುತ್ತಿವೆ. ಹಾಗೂ ಬೆಂಗಳೂರಿನ ಕಡೆ ಬರುವ ವಾಹನಗಳು ಕರಿಘಟ್ಟ ಜಂಕ್ಷನ್ನಿಂದ ಅರಕೆರೆ ಮಾರ್ಗವಾಗಿ ಸಂಚರಿಸುತಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...