alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿ ಜೊತೆ ಮೈತ್ರಿ ಮುಂದುವರಿಕೆಗೆ ಹೆಚ್.ಡಿ.ಕೆ. ನಿರ್ಧಾರ

h-d-kumaraswamyವಿಧಾನ ಪರಿಷತ್ ಸಭಾಪತಿ ಡಿ.ಹೆಚ್. ಶಂಕರಮೂರ್ತಿಯವರ ವಿರುದ್ದ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಅವಿಶ್ವಾಸ ಮಂಡನೆ ವಿಚಾರದಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕಿದ್ದ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮುಂದುವರೆಸಲು ನಿರ್ಧರಿಸಿರುವುದೇ ಇದಕ್ಕೆ ಕಾರಣ.

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ, ಜಾತ್ಯಾತೀತ ಪಕ್ಷಗಳು ಒಂದಾಗಬೇಕೆಂದಿದ್ದರೆ ಅವಿಶ್ವಾಸ ನಿರ್ಣಯ ಮಂಡನೆಗೂ ಮುನ್ನವೇ ನಮ್ಮೊಂದಿಗೆ ಕಾಂಗ್ರೆಸ್ ನಾಯಕರು ಚರ್ಚಿಸಬೇಕಿತ್ತು ಎಂದು ಹೇಳಿದ್ದಾರೆ.

ಜೆಡಿಎಸ್ ಸದಸ್ಯರನ್ನು ಪರಿಷತ್ ಸಭಾಪತಿಯನ್ನಾಗಿಸುವ ಆಫರ್ ನ್ನು ಇಂದು ಬೆಳಿಗ್ಗೆ ನೀಡುವ ಮೂಲಕ ಕಾಂಗ್ರೆಸ್ ನಾಯಕರು ಮನೆ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದಕ್ಕೆ ಜೆಡಿಎಸ್ ಶಾಸಕರು ಬಲಿಯಾಗುವುದಿಲ್ಲ. ಪರಿಷತ್ ಸಭಾಪತಿ ವಿಚಾರದಲ್ಲಿ ಮಾತ್ರ ಜೆಡಿಎಸ್, ಬಿಜೆಪಿ ಜೊತೆ ಮೈತ್ರಿ ಮುಂದುವರೆಸಲಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...