alex Certify
ಕನ್ನಡ ದುನಿಯಾ       Mobile App
       

Kannada Duniya

ಖಾತೆ ಹಂಚಿಕೆ ಬೆನ್ನಲ್ಲೇ ಜೆಡಿಎಸ್ ನಲ್ಲಿ ಭುಗಿಲೆದ್ದ ಅಸಮಾಧಾನ

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟ ಸರ್ಕಾರದ ಸಂಪುಟ ರಚನೆ ಬುಧವಾರದಂದು ನಡೆದಿದ್ದು, ಶುಕ್ರವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಖಾತೆ ಹಂಚಿಕೆ ಬಳಿಕ ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಾರಿಗೆ ಖಾತೆಯ ನಿರೀಕ್ಷೆಯಲ್ಲಿದ್ದ ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು ತಮಗೆ ಸಣ್ಣ ನೀರಾವರಿ ಇಲಾಖೆ ನೀಡಿರುವುದಕ್ಕೆ ಅಸಮಾಧಾನಗೊಂಡಿದ್ದಾರೆನ್ನಲಾಗಿದೆ. ಈ ಬೇಸರವನ್ನು ತಮ್ಮ ಬೆಂಬಲಿಗರ ಮುಂದೆಯೂ ಅವರು ತೋಡಿಕೊಂಡಿದ್ದಾರೆ.

ಇನ್ನು ಮೈಸೂರು ಜಿಲ್ಲೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಸಹ ತಮಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ಬೇಸರಗೊಂಡಿದ್ದಾರೆನ್ನಲಾಗಿದೆ. ಲೋಕೋಪಯೋಗಿ ಖಾತೆ ಮೇಲೆ ಕಣ್ಣಿಟ್ಟಿದ್ದ ಜಿ.ಟಿ. ದೇವೇಗೌಡರು, ಇದು ಹೆಚ್.ಡಿ. ರೇವಣ್ಣನವರ ಪಾಲಾಗುವುದು ಖಚಿತವಾಗುತ್ತಿದ್ದಂತೆ ಬೇರೊಂದು ಪ್ರಮುಖ ಖಾತೆಯನ್ನಾದರೂ ನೀಡಿ ಎಂದು ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.

ಈ ಮಧ್ಯೆ ತಮ್ಮ ಖಾತೆ ಕುರಿತು ಅಸಮಾಧಾನ ಹೊಂದಿರುವ ಸಣ್ಣ ನೀರಾವರಿ ಇಲಾಖೆ ಸಚಿವ ಸಿ.ಎಸ್. ಪುಟ್ಟರಾಜು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂಬ ಮಾತುಗಳೂ ಕೇಳಿ ಬರುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...