alex Certify
ಕನ್ನಡ ದುನಿಯಾ       Mobile App
       

Kannada Duniya

ಅಸಮಾಧಾನದ ಕುರಿತು ಸಚಿವ ಪುಟ್ಟರಾಜು ಹೇಳಿದ್ದೇನು?

ತಾವು ಬಯಸಿದ ಖಾತೆ ಸಿಗಲಿಲ್ಲವೆಂಬ ಕಾರಣಕ್ಕೆ ಪಕ್ಷದ ವರಿಷ್ಠರ ವಿರುದ್ಧ ಮುನಿಸಿಕೊಂಡು ಸಚಿವ ಸಿ.ಎಸ್. ಪುಟ್ಟರಾಜು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆಂದು ಹಬ್ಬಿದ್ದ ವದಂತಿಗಳಿಗೆ ಸ್ವತಃ ಸಚಿವರೇ ಸ್ಪಷ್ಟನೆ ನೀಡಿದ್ದಾರೆ.

ನಾನು ಯಾವುದೇ ನಿರ್ದಿಷ್ಟ ಖಾತೆಗೆ ಬೇಡಿಕೆ ಇಟ್ಟಿರಲಿಲ್ಲ. ನಮ್ಮ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಬೇಕೆಂಬುದು ನಮ್ಮಗಳ ಬಯಕೆಯಾಗಿತ್ತು. ಅದು ಈಗ ಈಡೇರಿದೆ. ಅಲ್ಲದೆ ಸಚಿವ ಸ್ಥಾನದ ಆಕಾಂಕ್ಷಿಯಾಗಿರದಿದ್ದರೂ ನನಗೆ ಆ ಸ್ಥಾನ ನೀಡಲಾಗಿದೆ ಎಂದಿದ್ದಾರೆ.

ನನ್ನ ಬೆಂಬಲಿಗರಲ್ಲಿ ಕೆಲವರಿಗೆ ಅಸಮಾಧಾನವಾಗಿರುವುದು ನಿಜ. ಆದರೆ ಯಾವುದೇ ಪ್ರತಿಭಟನೆ ಮಾಡದಂತೆ ಅವರುಗಳಿಗೆ ಸೂಚಿಸಿದ್ದೇನೆ. ಈಗ ನನಗೆ ನೀಡಲಾಗಿರುವ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...