alex Certify
ಕನ್ನಡ ದುನಿಯಾ       Mobile App
       

Kannada Duniya

ಯುಗಾದಿ ಬಳಿಕ ಜೆ.ಡಿ.ಎಸ್. ಬಂಡಾಯ ಶಾಸಕರು ಕಾಂಗ್ರೆಸ್ ಗೆ

ಬೆಂಗಳೂರು : ಜೆ.ಡಿ.ಎಸ್. ಪಕ್ಷದಿಂದ ಅಮಾನತುಗೊಂಡಿರುವ ಶಾಸಕರು ಯುಗಾದಿ ಬಳಿಕ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ.

ರಾಜ್ಯಸಭೆ ಚುನಾವಣೆ ಹಾಗೂ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜ್ಯ ರಾಜಕಾರಣ ರಂಗೇರತೊಡಗಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಜ್ಜಾಗಿರುವ ಜೆ.ಡಿ.ಎಸ್.ನಿಂದ ಅಮಾನತುಗೊಂಡಿರುವ ಶಾಸಕರು, ಕಳೆದ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು. ಈ ಬಾರಿಯೂ ಅದು ಪುನರಾವರ್ತನೆಯಾಗುವ ಸಾಧ್ಯತೆ ಇದೆ.

ಚೆಲುವರಾಯಸ್ವಾಮಿ, ಜಮೀರ್ ಅಹಮ್ಮದ್, ಹೆಚ್.ಸಿ. ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಭೀಮಾನಾಯ್ಕ್ ಅವರು, ರಾಜ್ಯಸಭೆ ಚುನಾವಣೆ ಬಳಿಕ, ಮಾರ್ಚ್ 24 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲಿ ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

ಈ ನಡುವೆ ಬಂಡಾಯ ಶಾಸಕರ ವಿರುದ್ಧ ಸ್ಪೀಕರ್ ಗೆ ದೂರು ನೀಡಿದರೂ ಕ್ರಮಕೈಗೊಳ್ಳದ ಕಾರಣ, ಹೈಕೋರ್ಟ್ ಮೊರೆ ಹೋಗಲು ಜೆ.ಡಿ.ಎಸ್. ನಾಯಕರು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...