alex Certify
ಕನ್ನಡ ದುನಿಯಾ       Mobile App
       

Kannada Duniya

ಏನಾಗಲಿದೆ JDS ಬಂಡಾಯ ಶಾಸಕರ ಭವಿಷ್ಯ…?

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಚಲಾಯಿಸಿದ್ದ ಜೆ.ಡಿ.ಎಸ್. ಬಂಡಾಯ ಶಾಸಕರ ಭವಿಷ್ಯ ನಾಳೆ ತೀರ್ಮಾನವಾಗುವ ಸಾಧ್ಯತೆ ಇದೆ.

2016 ರಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದರು. ಜೆ.ಡಿ.ಎಸ್.ನಿಂದ ಹಿಂದೆಯೇ ಸ್ಪೀಕರ್ ಗೆ ದೂರು ನೀಡಿದ್ದರೂ, ಕ್ರಮ ಕೈಗೊಳ್ಳದ ಕಾರಣ, ಹೈಕೋರ್ಟ್ ಮೊರೆ ಹೋಗಲಾಗಿದೆ.

ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ನಾಳೆಯೇ ಸ್ಪೀಕರ್ ತೀರ್ಪು ನೀಡಬೇಕೆಂದು ನಿರ್ದೇಶನ ನೀಡಲಾಗಿದೆ. ಜಮೀರ್ ಅಹಮ್ಮದ್ ಖಾನ್, ಹೆಚ್.ಸಿ. ಬಾಲಕೃಷ್ಣ, ಚೆಲುವರಾಯ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ, ಭೀಮಾನಾಯ್ಕ್, ಅಖಂಡ ಶ್ರೀನಿವಾಸಮೂರ್ತಿ ಅವರು ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಿದ್ದರು.

ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆ ಬಳಿಕ ಈ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಇಂದು ಹೈಕೋರ್ಟ್ ನಲ್ಲಿ ಅಡ್ವೋಕೇಟ್ ಜನರಲ್ ಅವರು, ತೀರ್ಪು ನೀಡಲು ಸಮಯ ಬೇಕಿದೆ ಎಂದಿದ್ದು, ಹೈಕೋರ್ಟ್ ರಾಜ್ಯಸಭೆ ಚುನಾವಣೆ ಇರುವುದರಿಂದ ನಾಳೆಯೇ ತೀರ್ಪು ಪ್ರಕಟಿಸುವಂತೆ ನಿರ್ದೇಶನ ನೀಡಿದೆ. ಹೈಕೋರ್ಟ್ ಸೂಚನೆ ಹಿನ್ನಲೆಯಲ್ಲಿ ಸ್ಪೀಕರ್, ಅಡ್ವೋಕೇಟ್ ಜನರಲ್ ಅವರನ್ನು ಕರೆಸಿಕೊಂಡು ಕಾನೂನು ಸಲಹೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...