alex Certify
ಕನ್ನಡ ದುನಿಯಾ       Mobile App
       

Kannada Duniya

JDS ಬಂಡಾಯ ಶಾಸಕರಿಗೆ ಕಾಂಗ್ರೆಸ್ ಎಂಟ್ರಿ ಸಿಗುತ್ತಾ? ಇಲ್ವಾ? ಇಲ್ಲಿದೆ ಮಾಹಿತಿ

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಹಿಂದೆಯೇ ಜೆ.ಡಿ.ಎಸ್.ನಿಂದ ದೂರವಾಗಿರುವ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿತ್ತಾದರೂ ಕಾರಣಾಂತರದಿಂದ ಕಾಲ ಕೂಡಿ ಬಂದಿರಲಿಲ್ಲ.

ಜೆ.ಡಿ.ಎಸ್. ಬಂಡಾಯ ಶಾಸಕರ ಕ್ಷೇತ್ರಗಳ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ವಿರೋಧ ವ್ಯಕ್ತವಾಗಿದ್ದು ಸೇರಿದಂತೆ ಹಲವು ಕಾರಣಗಳಿಂದ ಕಾಂಗ್ರೆಸ್ ಸೇರ್ಪಡೆಗೆ ಹಿನ್ನಡೆಯಾಗಿತ್ತು. ಈಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಾಸಕರಿಗೆ ಭರವಸೆ ನೀಡಿದ್ದಾರೆ.

ಜೆ.ಡಿ.ಎಸ್.ನಿಂದ ದೂರವಾಗಿರುವ 7 ಮಂದಿ ಶಾಸಕರು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕಣಕ್ಕಿಳಿಯಲಿದ್ದಾರೆ. ಶಾಸಕರಾದ ಚೆಲುವರಾಯಸ್ವಾಮಿ, ಜಮೀರ್ ಅಹಮ್ಮದ್, ರಮೇಶ್ ಬಂಡಿಸಿದ್ದೇಗೌಡ, ಬಾಲಕೃಷ್ಣ, ಇಕ್ಬಾಲ್ ಅನ್ಸಾರಿ, ಭೀಮಾನಾಯ್ಕ್ ಹಾಗೂ ಅಖಂಡ ಶ್ರೀನಿವಾಸ ಮೂರ್ತಿ ಅವರು ಕಾಂಗ್ರೆಸ್ ಸೇರಲು ಮುಹೂರ್ತ ಫಿಕ್ಸ್ ಆಗಿದೆ ಎನ್ನಲಾಗಿದೆ.

ಚೆಲುವರಾಯಸ್ವಾಮಿ ನಿವಾಸಕ್ಕೆ ಆಗಮಿಸಿದ್ದ ಸಿ.ಎಂ., ಶಾಸಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾರ್ಚ್ 23 ರಂದು ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಇದಾದ ಮರುದಿನ ಈ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...