alex Certify
ಕನ್ನಡ ದುನಿಯಾ       Mobile App
       

Kannada Duniya

ರೆಸಾರ್ಟ್ ನಿಂದ ಸ್ವ ಕ್ಷೇತ್ರಕ್ಕೆ ತೆರಳಿದ ಜೆಡಿಎಸ್ ಶಾಸಕ

ಮುಖ್ಯಮಂತ್ರಿಯಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ವಿಶ್ವಾಸಮತ ಸಾಬೀತುಪಡಿಸಬೇಕಿರುವ ಹಿನ್ನಲೆಯಲ್ಲಿ ಜೆಡಿಎಸ್ ಶಾಸಕರುಗಳು ನಂದಿ ಬೆಟ್ಟ ರಸ್ತೆಯಲ್ಲಿರುವ ದೇವನಹಳ್ಳಿ ಸಮೀಪದ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್ ನಲ್ಲಿ ಬೀಡು ಬಿಟ್ಟಿದ್ದಾರೆ.

ರೆಸಾರ್ಟ್ ನಲ್ಲಿದ್ದ ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಸತ್ಯನಾರಾಯಣ ಈಗ ತಮ್ಮ ಕ್ಷೇತ್ರದತ್ತ ಮುಖ ಮಾಡಿದ್ದಾರೆ. ಶಿರಾ ವಿಧಾನಸಭಾ ಕ್ಷೇತ್ರದ ಶಿರಾ ಹಾಗೂ ಪಟ್ಟನಾಯಕನ ಹಳ್ಳಿಯ ನಿವಾಸಿಗಳು ದೇವರ ದರ್ಶನಕ್ಕೆಂದು ಸಿಗಂದೂರಿಗೆ ತೆರಳಿದ್ದು, ವಾಪಾಸ್ ಊರಿಗೆ ಮರಳುವ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಲಾರಿ ನಡುವೆ ನಡೆದ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಂತೈಸಲು ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಯೋಗಕ್ಷೇಮ ವಿಚಾರಿಸುವ ಸಲುವಾಗಿ ಶಾಸಕ ಸತ್ಯನಾರಾಯಣ, ರೆಸಾರ್ಟ್ ನಿಂದ ತೆರಳಿದ್ದಾರೆ. ಸಂಜೆ ಅವರು ಮತ್ತೆ ಮರಳಿ ರೆಸಾರ್ಟ್ ಗೆ ಬರಲಿದ್ದಾರೆಂದು ಮೂಲಗಳು ಹೇಳಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...