alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ನಲ್ಲಿ ಭುಗಿಲೆದ್ದ ಭಿನ್ನಮತ: ಶಾಸಕ ರಾಜೀನಾಮೆ

jds-party-symbolಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಭಿನ್ನಮತದಿಂದ ತತ್ತರಿಸುತ್ತಿರುವ ಮಧ್ಯೆ ಮತ್ತೊಂದು ಪ್ರಮುಖ ಪಕ್ಷ ಜೆಡಿಎಸ್ ನಲ್ಲೂ ಭಿನ್ನಮತ ವ್ಯಕ್ತವಾಗಿದೆ. ಶಾಸಕರೊಬ್ಬರು ಜೆಡಿಎಸ್ ಹಾಗೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ದೇವನಹಳ್ಳಿ ಜೆಡಿಎಸ್ ಶಾಸಕ ಪಿಳ್ಳ ಮುನಿಶಾಮಪ್ಪ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಯಾವುದೇ ಕಾರಣಕ್ಕೂ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಕೂಡಲೇ ಅಂಗೀಕರಿಸುವಂತೆ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡರಿಗೆ ಮನವಿ ಮಾಡಿದ್ದಾರೆನ್ನಲಾಗಿದೆ.

ನಿಸರ್ಗ ನಾರಾಯಣಸ್ವಾಮಿ ಜೆಡಿಎಸ್ ಸೇರ್ಪಡೆಯನ್ನು ವಿರೋಧಿಸಿ ಪಿಳ್ಳಮುನಿಶಾಮಪ್ಪ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗಿದ್ದು, ಜೆಡಿಎಸ್ ಪಕ್ಷಕ್ಕೂ ಗುಡ್ ಬೈ ಹೇಳಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...