alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಸೇರ್ಪಡೆಯಾಗಲಿದ್ದಾರೆ ‘ಪವರ್ ಸ್ಟಾರ್’

pawan kalyan

ಸಿನಿಮಾ ಮತ್ತು ರಾಜಕೀಯ ಬೇರೆ ಕ್ಷೇತ್ರಗಳಾದರೂ, ಒಂದಕ್ಕೊಂದು ಪೂರಕವಾಗಿವೆ. ಚಿತ್ರರಂಗದಲ್ಲಿ ಮಿಂಚಿದವರು ರಾಜಕಾರಣದಲ್ಲಿಯೂ ತಮ್ಮದೇ ಛಾಪನ್ನು ಮೂಡಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಈಗಿನಿಂದಲೇ ಕಾರ್ಯತಂತ್ರ ರೂಪಿಸುತ್ತಿರುವ ಜೆ.ಡಿ.ಎಸ್. ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ತೆಲುಗಿನ ಖ್ಯಾತ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರನ್ನು ಜೆ.ಡಿ.ಎಸ್. ಗೆ ಕರೆತರಲು ಮಾತುಕತೆ ನಡೆಸಲಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವಿಷಯ ತಿಳಿಸಿದ್ದು, ಪವನ್ ಕಲ್ಯಾಣ್ ಅವರನ್ನು ಪಕ್ಷಕ್ಕೆ ಕರೆತರಲು ವೇದಿಕೆ ಸಿದ್ಧವಾಗುತ್ತಿದೆ ಎಂದು ಹೇಳಿದ್ದಾರೆ.

ಪವನ್ ಕಲ್ಯಾಣ್ ಅವರಿಗೆ ರಾಜಕೀಯಕ್ಕೆ ಬರಲು ಆಸಕ್ತಿ ಇದೆ. ತಾವೇ ಅವರೊಂದಿಗೆ ಚರ್ಚೆ ನಡೆಸಲಿದ್ದು, ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಕರೆತರಲಾಗುವುದು ಎಂದು ತಿಳಿಸಿದ್ದಾರೆ. ಪವನ್ ಕಲ್ಯಾಣ್ ಜೆ.ಡಿ.ಎಸ್.ಗೆ ಸೇರ್ಪಡೆಯಾದಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...