alex Certify
ಕನ್ನಡ ದುನಿಯಾ       Mobile App
       

Kannada Duniya

ಜೆ.ಡಿ.ಎಸ್. ಯುವ ನಾಯಕ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್

ಮುಂದಿನ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಜೆ.ಡಿ.ಎಸ್., ರಾಷ್ಟ್ರೀಯ ಪಕ್ಷಗಳಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಬೆಂಗಳೂರಿನ ನಿನ್ನೆ ನಡೆದ ವಿಕಾಸ ಪರ್ವ ಸಮಾವೇಶದಲ್ಲಿ ಲಕ್ಷಾಂತರ ಜನರ ಸಮ್ಮುಖದಲ್ಲಿ ಪಕ್ಷದ ವರಿಷ್ಠರು ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

126 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಜೆ.ಡಿ.ಎಸ್. ಪ್ರಕಟಿಸಿದ್ದು, ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರ ಕುಟುಂಬದಿಂದ ಇಬ್ಬರಿಗೆ ಟಿಕೆಟ್ ನೀಡಲಾಗಿದೆ. ರಾಮನಗರದಿಂದ ಹೆಚ್.ಡಿ. ಕುಮಾರಸ್ವಾಮಿ, ಹೊಳೆನರಸೀಪುರದಿಂದ ಹೆಚ್.ಡಿ. ರೇವಣ್ಣ ಕಣಕ್ಕಿಳಿಯಲಿದ್ದಾರೆ.

ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತಾದರೂ, ಮೊದಲ ಪಟ್ಟಿಯಲ್ಲಿ ಆ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿಲ್ಲ.

ಹೆಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ಸಿಕ್ಕಿಲ್ಲ. ಪ್ರಜ್ವಲ್ ರೇವಣ್ಣ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹಲವು ಕ್ಷೇತ್ರಗಳಲ್ಲಿ ತಯಾರಿ ನಡೆಸಿದ್ದರು. ಬೆಂಗಳೂರು ರಾಜರಾಜೇಶ್ವರಿ ನಗರ, ಬೇಲೂರು ಹಾಗೂ ಮೈಸೂರು ಜಿಲ್ಲೆಯ ಕ್ಷೇತ್ರವೊಂದರಿಂದ ಕಣಕ್ಕಿಳಿಯಲು ಅವರು ಸಿದ್ಧತೆ ಮಾಡಿಕೊಂಡಿದ್ದರು.

ನಂತರದಲ್ಲಿ ಪ್ರಜ್ವಲ್ ಅವರಿಗೆ ಪಕ್ಷದಲ್ಲಿ ಸ್ಥಾನ ನೀಡಿ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸೂಚಿಸಲಾಗಿತ್ತು. ಪ್ರಜ್ವಲ್ ರೇವಣ್ಣ ಬೇಲೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತಾದರೂ, ಬೇಲೂರು ಕ್ಷೇತ್ರದಲ್ಲಿ ಕೆ.ಎಸ್. ಲಿಂಗೇಶ್ ಅವರು ಅಭ್ಯರ್ಥಿಯಾಗಿದ್ದಾರೆ.

ಹುಣಸೂರಿನಿಂದ ಹೆಚ್. ವಿಶ್ವನಾಥ್, ಚಾಮುಂಡೇಶ್ವರಿ ಕ್ಷೇತ್ರದಿಂದ ಜಿ.ಟಿ. ದೇವೇಗೌಡ, ಮೇಲುಕೋಟೆಯಿಂದ ಸಿ.ಎಸ್. ಪುಟ್ಟರಾಜು, ಶಿವಮೊಗ್ಗದಿಂದ ನಿರಂಜನ್, ತೀರ್ಥಹಳ್ಳಿಯಿಂದ ಆರ್.ಎಂ. ಮಂಜುನಾಥ ಗೌಡ, ಚನ್ನಗಿರಿಯಿಂದ ಹೊದಿಗೆರೆ ರಮೇಶ್ ಅವರು ಅಭ್ಯರ್ಥಿಗಳಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...