alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಲು ಕಾರ್ಯಕರ್ತರ ಪಟ್ಟು

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ, ಜೆ.ಡಿ.ಎಸ್. ಕಾರ್ಯಕರ್ತರು ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡರ ನಿವಾಸದ ಎದರು ಧರಣಿ ನಡೆಸಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಎದುರು ಆರ್.ಆರ್. ನಗರದ ಜೆ.ಡಿ.ಎಸ್. ಪಕ್ಷದ ಮುಖಂಡ ಮಂಜುನಾಥ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ.

ಆರ್. ಆರ್. ನಗರದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ನೀಡಿದರೆ ಶ್ರಮವಹಿಸಿ ಅವರನ್ನು ಗೆಲ್ಲಿಸುತ್ತೇವೆ. ಇಲ್ಲವಾದಲ್ಲಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಧರಣಿ ನಿರತರೊಂದಿಗೆ ಮಾತನಾಡಿದ ದೇವೇಗೌಡರು, ನಿಮ್ಮ ಹೋರಾಟಕ್ಕೆ ಸಮಹಮತವಿದೆ. ಆದರೆ, ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಗೌಡರ ಭರವಸೆ ಬಳಿಕ ಹೋರಾಟ ಹಿಂಪಡೆಯಲು ಕಾರ್ಯಕರ್ತರು ತೀರ್ಮಾನಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...