alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಭವನದ ಮುಂದೆ ಹೈಡ್ರಾಮಾ: ಶಾಸಕರ ಪ್ರತಿಭಟನೆ

ರಾಜ್ಯ ರಾಜಕೀಯದಲ್ಲಿ ಹೈಡ್ರಾಮಾ ಮುಂದುವರೆದಿದೆ. ರಾಜಭವನ ಸದ್ಯ ಶಾಸಕರ ನಾಟಕಕ್ಕೆ ವೇದಿಕೆಯಾಗಿದೆ. ರಾಜಭವನದ ಮುಂದೆ ಕಾಂಗ್ರೆಸ್-ಜೆಡಿಎಸ್ ಶಾಸಕರು ಪರೇಡ್ ನಡೆಸುತ್ತಿದ್ದಾರೆ. ಜೆಡಿಎಸ್-ಕಾಂಗ್ರೆಸ್ ನಾಯಕರ ತಂಡವೊಂದು ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡನೆ ಮಾಡಲು ಮನವಿ ಮಾಡಿದೆ.

ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದೆ.

ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜ್ಯಪಾಲರ ಭೇಟಿಗೆ ಮುಂದಾಗಿದ್ದರು. ಆದ್ರೆ ಶಾಸಕರ ಭೇಟಿಗೆ ರಾಜಭವನ ಸಿಬ್ಬಂದಿ ಅವಕಾಶ ನೀಡಿಲ್ಲ. ಇದ್ರಿಂದ ಆಕ್ರೋಶಗೊಂಡ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜಭವನದ ಮುಂದೆ ಪ್ರತಿಭಟನೆ ಶುರು ಮಾಡಿದ್ದಾರೆ.

ಈಗಲ್ ಟನ್ ರೆಸಾರ್ಟ್ ಗೆ ತೆರಳುವ ಮುನ್ನ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರು ತಮ್ಮ ಬಲ ಪ್ರದರ್ಶನಕ್ಕೆ ಈ ಕ್ರಮ ಕೈಗೊಂಡಿದ್ದಾರೆ. ಆದ್ರೆ ಕಾಂಗ್ರೆಸ್ ನ ಎಲ್ಲ 78 ಶಾಸಕರು ರಾಜಭವನದ ಮುಂದಿಲ್ಲ. ಎಲ್ಲರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...