alex Certify
ಕನ್ನಡ ದುನಿಯಾ       Mobile App
       

Kannada Duniya

ದಿಗ್ವಿಜಯ್ ಸಿಂಗ್ ರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ ಜಮೀರ್

Zameer 7890ಜೆಡಿಎಸ್ ಶಾಸಕ ಜಮೀರ್ ಅಹ್ಮದ್ ಖಾನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಾಜ್ಯಸಭೆಗೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಜಮೀರ್ ಅವರ ಈ ಭೇಟಿ ಕುತೂಹಲ ಕೆರಳಿಸಿದೆ.

ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಚಿಂತನೆ ನಡೆದಿದ್ದು, ಜೆಡಿಎಸ್ ಭಿನ್ನಮತೀಯ ಶಾಸಕರುಗಳಾದ ಜಮೀರ್ ಅಹ್ಮದ್ ಖಾನ್, ಚೆಲುವರಾಯ ಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ, ಇಕ್ಬಾಲ್ ಅನ್ಸಾರಿ ಹಾಗೂ ಹೆಚ್.ಸಿ. ಬಾಲಕೃಷ್ಣ ಕಾಂಗ್ರೆಸ್ ನ ಮೂರನೇ ಅಭ್ಯರ್ಥಿ ಕೆ.ಸಿ. ರಾಮಮೂರ್ತಿಯವರನ್ನು ಬೆಂಬಲಿಸಲು ತೀರ್ಮಾನಿಸಿದ್ದಾರೆನ್ನಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಮೀರ್ ಅಹ್ಮದ್ ಖಾನ್ ಅವರ ದಿಗ್ವಿಜಯ್ ಸಿಂಗ್ ಜೊತೆಗಿನ ಭೇಟಿ ಮಹತ್ವ ಪಡೆದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ಕೂಡಾ ದೆಹಲಿಯಲ್ಲೇ ಇದ್ದು, ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿರುವ ಅವರು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನೂ ಭೇಟಿಯಾಗಿ ಕರ್ನಾಟಕದಿಂದ ಮೂರನೇ ಅಭ್ಯರ್ಥಿ ಕಣಕ್ಕಿಳಿಸುವ ಕುರಿತು ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗಿದೆ. ಉದ್ಯಮಿ ಬಿ.ಎ. ಫಾರೂಕ್ ಅವರನ್ನು ಕರ್ನಾಟಕದಿಂದ ರಾಜ್ಯಸಭೆಗೆ ಕಳಿಸಲು ಜೆಡಿಎಸ್ ತೀರ್ಮಾನಿಸಿದ್ದು, ಇದೀಗ ಐವರು ಜೆಡಿಎಸ್ ಶಾಸಕರು ಈ ನಿರ್ಧಾರಕ್ಕೆ ಸೆಡ್ಡು ಹೊಡೆದು ಕಾಂಗ್ರೆಸ್ ಬೆಂಬಲಿಸಲು ನಿರ್ಧರಿಸಿರುವುದು ಪಕ್ಷಕ್ಕೆ ಹಿನ್ನಡೆಯುಂಟಾಗುವಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...