alex Certify
ಕನ್ನಡ ದುನಿಯಾ       Mobile App
       

Kannada Duniya

ಜೆಡಿಎಸ್ ರೆಬೆಲ್ ಶಾಸಕರಿಂದ ಅಮಾವಾಸ್ಯೆ ಪೂಜೆ

ಕಾಂಗ್ರೆಸ್ ಕಡೆ ಮುಖ ಮಾಡಿರುವ ಜೆಡಿಎಸ್ ಬಂಡಾಯ ಶಾಸಕರು ಇಂದು ಕುಟುಂಬ ಸಮೇತರಾಗಿ ಆದಿಚುಂಚನಗಿರಿಯಲ್ಲಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀ ಕಾಲ ಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ನಾಗಮಂಗಲ ಕ್ಷೇತ್ರದ ಶಾಸಕ ಎನ್, ಚೆಲುವರಾಯ ಸ್ವಾಮಿ, ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ಬಾಬು ಬಂಡಿಸಿದ್ದೇಗೌಡ ಹಾಗೂ ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ ಕುಟುಂಬ ಸಮೇತರಾಗಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.

ಜೆಡಿಎಸ್ ಬಂಡಾಯ ಶಾಸಕರಿಗೆ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರದಲ್ಲೇ ಟಿಕೇಟ್ ನೀಡಲು ಕಾಂಗ್ರೆಸ್ ವರಿಷ್ಟರು ಸಮ್ಮತಿಸಿದ್ದಾರೆನ್ನಲಾಗಿದ್ದು, ಶೀಘ್ರದಲ್ಲೇ ಇವರುಗಳು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...