alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಗ್ನೇಶ್ ಮೇವಾನಿಯವರ ಮುಂದಿನ ಗುರಿ ಕರ್ನಾಟಕ

ದಲಿತ ಕಾರ್ಯಕರ್ತ ಹಾಗೂ ನೂತನ ಶಾಸಕ ಜಿಗ್ನೇಶ್ ಮೇವಾನಿ 2018ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಬರಲಿದ್ದಾರೆ. ಡಿಸೆಂಬರ್ 28ರಂದು ಬೆಂಗಳೂರಿಗೆ ಆಗಮಿಸಲಿರುವ ಮೇವಾನಿ, ತಮ್ಮ ಪ್ರಚಾರದ ರೂಪುರೇಷೆ ಸಿದ್ಧಪಡಿಸಲಿದ್ದಾರೆ.

ಗುಜರಾತ್ ನಂತೆ ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಹಣಾಹಣಿ ಏರ್ಪಡಲಿದೆ. 2013ರ ಚುನಾವಣೆಯಲ್ಲಿ ಸೋತಿದ್ದ ಕೇಸರಿ ಪಕ್ಷ ಈ ಬಾರಿ ಕರ್ನಾಟಕವನ್ನು ಕೈವಶ ಮಾಡಿಕೊಳ್ಳಲೇಬೇಕೆಂಬ ಹವಣಿಕೆಯಲ್ಲಿದೆ.

ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ ಅಂತಾ ಮೇವಾನಿ ಸ್ಪಷ್ಟಪಡಿಸಿದ್ದಾರೆ. ಕರ್ನಾಟಕದಲ್ಲಿ ಗುಜರಾತ್ ಗಿಂತ್ಲೂ ಹೆಚ್ಚಿನ ಸಂಖ್ಯೆಯಲ್ಲಿ ದಲಿತರಿದ್ದಾರೆ. ಅವರನ್ನು ತಲುಪುವುದು ನನ್ನ ಮುಖ್ಯ ಉದ್ದೇಶ, ನಾಗರಿಕ ಸಮಾಜ ಮತ್ತು ಸ್ವತಂತ್ರ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.

ಗುಜರಾತ್ ನ ವಡ್ಗಾಂವ್ ಕ್ಷೇತ್ರದಲ್ಲಿ ಜಿಗ್ನೇಶ್ ಮೇವಾನಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅವರನ್ನು ಬೆಂಬಲಿಸಿತ್ತು. ಈಗ ತಮ್ಮ ಮುಂದಿನ ಗುರಿ ಕರ್ನಾಟಕ ಅಂತಾ ಮೇವಾನಿ ಸ್ಪಷ್ಟಪಡಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...