alex Certify
ಕನ್ನಡ ದುನಿಯಾ       Mobile App
       

Kannada Duniya

ಜಿಮ್‌ ಟ್ರೈನರ್‌ ಮೇಲೆ ಹಲ್ಲೆ ನಡೆಸಿ ಹಣ ದೋಚಿ ಪರಾರಿ

ಬೆಂಗಳೂರು: ಐಪಿಎಸ್‌ ಅಧಿಕಾರಿಯೊಬ್ಬರ ಜಿಮ್‌ ಟ್ರೈನರ್‌ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು, 30 ಸಾವಿರ ರೂ. ದೋಚಿ ಪರಾರಿಯಾಗಿರುವ ಘಟನೆ ಬ್ರಿಗೇಡ್‌ ರಸ್ತೆಯಲ್ಲಿ ನಡೆದಿದೆ.

ಜಾರ್ಖಂಡ್‌ ಮೂಲದ ಬಿ. ಆನಂದ ಕುಮಾರ್‌ (30) ದರೋಡೆಗೆ ಒಳಗಾದವರು. ಬ್ರಿಗೇಡ್‌ ರಸ್ತೆಯಲ್ಲಿರುವ ಪಬ್‌ನಿಂದ ಹೊರ ಬಂದ ಆನಂದ್ ಹಾಗೂ ಅವರ ಸ್ನೇಹಿತ ಕಾರ್‌ ಪಾರ್ಕಿಂಗ್‌ ಬಳಿ ಬರುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಆರು ಜನರ ದುಷ್ಕರ್ಮಿಗಳ ತಂಡ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಗುಂಪಿನಲ್ಲಿದ್ದ ಓರ್ವ ಆನಂದ್ ಅವರ ಪ್ಯಾಂಟಿನ ಜೇಬಿನಲ್ಲಿಟ್ಟಿದ್ದ 30 ಸಾವಿರ ರೂ. ಕಿತ್ತುಕೊಂಡಿದ್ದಾನೆ. ಬಳಿಕ ಎಲ್ಲರೂ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಆನಂದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಆನಂದ್ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...