alex Certify
ಕನ್ನಡ ದುನಿಯಾ       Mobile App
       

Kannada Duniya

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ: 20 ಸಾವಿರ ಹುದ್ದೆಗಳಿಗೆ ನಡೆಯಲಿದೆ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 20,000 ಪೊಲೀಸ್ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನಡೆದ ಕೆ.ಎಸ್. ಆರ್.ಪಿ. ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹುದ್ದೆಗಳ ನೇಮಕಾತಿಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸರಿಗೆ ನೀಡಲು 11 ಸಾವಿರ ಮನೆಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದ ಸಚಿವ ಪರಮೇಶ್ವರ್, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನ ಸಂಸ್ಥೆ ಇನ್ಫೋಸಿಸ್ ನೆರವಿನಿಂದ 22 ಕೋಟಿ ರೂಪಾಯಿ ವೆಚ್ಚದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...