alex Certify
ಕನ್ನಡ ದುನಿಯಾ       Mobile App
       

Kannada Duniya

ಜೋಗ ವಿದ್ಯುದಾಗಾರದಲ್ಲಿ ಭಾರೀ ಬೆಂಕಿ

jog

ಶಿವಮೊಗ್ಗ: ಜೋಗ ಜಲಪಾತದ ಶರಾವತಿ ಜಲ ವಿದ್ಯುದಾಗಾರದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ತಗುಲಿದ ಬೆಂಕಿ ಏಕಾಏಕಿ ಮೂರೂ ಅಂತಸ್ತುಗಳಿಗೂ ವ್ಯಾಪಿಸಿದೆ.

ಕೂಡಲೇ ಅಗ್ನಿಶಾಮಕ ವಾಹನಗಳಿಗೆ ಕರೆ ಮಾಡಿ ಅಲ್ಲಿನ ಸಿಬ್ಬಂದಿ ವಿದ್ಯುತ್ ಲೈನ್ ಗಳನ್ನು ಆಫ್ ಮಾಡಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಶಿವಮೊಗ್ಗ, ಸಾಗರದಿಂದ ಅಗ್ನಿಶಾಮಕ ವಾಹನಗಳನ್ನು ಕರೆಯಿಸಿಕೊಂಡು ವ್ಯಾಪಿಸಬಹುದಾಗಿದ್ದ ಭಾರೀ ಬೆಂಕಿಯನ್ನು ನಂದಿಸಲಾಗಿದೆ. ಮೂರನೇ ಮಹಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ರಕ್ಷಿಸಲಾಗಿದೆ. ಶರಾವತಿ ಕಣಿವೆಯಲ್ಲಿ 10 ವಿದ್ಯುತ್ ಉತ್ಪಾದನಾ ಘಟಕಗಳಿದ್ದು, ಇವುಗಳಿಂದ 1035 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತದೆ. ಬೆಂಕಿ ಅವಘಡದಿಂದಾಗಿ ತೊಂದರೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಂಡ ನಂತರದಲ್ಲಿ ಇಡೀ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಕಾರ್ಯಾಚರಣೆಗೆ ಭಾರೀ ತೊಂದರೆಯಾಗಿತ್ತು. ಇದರಿಂದ ಸ್ಥಳದಲ್ಲಿದ್ದ ಸಿಬ್ಬಂದಿಯನ್ನು ರಕ್ಷಿಸಲು ಹರಸಾಹಸ ಪಡುವಂತಾಗಿತ್ತು. ಸತತ ಪ್ರಯತ್ನದ ನಂತರ ಎಲ್ಲರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...