alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ಕಿರುಕುಳ ಕೇಸಲ್ಲಿ ವಸೂಲಿ, ಪತ್ರಕರ್ತ ಅರೆಸ್ಟ್

ಚಿಕ್ಕಮಗಳೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಗೆ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ, ಹಣ ವಸೂಲಿ ಮಾಡಿದ್ದ ಮೂವರು ಪತ್ರಕರ್ತರಲ್ಲಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದ ಖಾಸಗಿ ಕಾಲೇಜೊಂದರ ಪ್ರಾಂಶುಪಾಲ, ಸ್ಪೆಷಲ್ ಕ್ಲಾಸ್ ನೆಪದಲ್ಲಿ ಪಿ.ಯು.ಸಿ. ವಿದ್ಯಾರ್ಥಿನಿಯನ್ನು ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ.

ನೊಂದ ವಿದ್ಯಾರ್ಥಿನಿ ಎಸ್.ಪಿ. ಯವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆ ಪೊಲೀಸರು ಪ್ರಾಂಶುಪಾಲನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.

ತನಿಖೆಯ ಸಂದರ್ಭದಲ್ಲಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ವಿಷಯ ತಿಳಿದ ಮೂವರು ಪತ್ರಕರ್ತರು ಪ್ರಾಂಶುಪಾಲನಿಂದ ಹಣ ಪಡೆದುಕೊಂಡಿರುವುದು ಗೊತ್ತಾಗಿದೆ. ಪ್ರಾಂಶುಪಾಲನನ್ನು ಭೇಟಿ ಮಾಡಿದ ಪತ್ರಕರ್ತರು, ಕೇಳಿದಷ್ಟು ಹಣ ಕೊಡದಿದ್ದರೆ, ತಮ್ಮ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟಿಸುವುದಾಗಿ ಬೆದರಿಸಿದ್ದಾರೆ.

ಅಲ್ಲದೇ, 1.30 ಲಕ್ಷ ರೂ. ವಸೂಲಿ ಮಾಡಿದ್ದಾರೆ. ವಿಚಾರಣೆಯಲ್ಲಿ ಈ ಕುರಿತಾಗಿ ಮಾಹಿತಿ ಪಡೆದ ಪೊಲೀಸರು ಓರ್ವ ಪತ್ರಕರ್ತನನ್ನು ಬಂಧಿಸಿದ್ದು, ಮತ್ತಿಬ್ಬರು ತಲೆಮರೆಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...