alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದ ಶಾಸಕ…!

ಶಿವಮೊಗ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳಿದ್ದರೂ, ಉಳ್ಳವರು ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಾರೆ. ಇನ್ನು ಕೆಲವೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಸೌಲಭ್ಯಗಳಿಲ್ಲದ ಕಾರಣ, ಖಾಸಗಿ ಆಸ್ಪತ್ರೆಗಳ ಮೊರೆ ಹೋಗುತ್ತಾರೆ.

ಶಿವಮೊಗ್ಗ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಸರ್ಕಾರಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆದು ಗಮನ ಸೆಳೆದಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಭಾಗವಹಿಸಿದ್ದ ಶಾಸಕರು ಅಲ್ಲಿಂದ ಬಂದ ನಂತರ, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಪ್ರಸನ್ನಕುಮಾರ್ ಸರ್ಕಾರಿ ಆಸ್ಪತ್ರೆಯಲ್ಲಿ ಸರದಿ ಸಾಲಿನಲ್ಲಿ ನಿಂತಿದ್ದನ್ನು ಕಂಡ ಸಾರ್ವಜನಿಕರು ಅಚ್ಚರಿಯಾಗಿದ್ದಾರೆ. ಶಾಸಕರು ಚಿಕಿತ್ಸೆಗೆ ತೆರಳಲು ದಾರಿ ಮಾಡಿಕೊಟ್ಟಿದ್ದಾರೆ. ಆಸ್ಪತ್ರೆಯ ತಜ್ಞ ವೈದ್ಯರು ಶಾಸಕರನ್ನು ಪರೀಕ್ಷಿಸಿದ್ದು, ಆಹಾರ ವ್ಯತ್ಯಾಸದಿಂದ ಸಮಸ್ಯೆಯಾಗಿರುವ ಕಾರಣ ಚಿಕಿತ್ಸೆ, ಸಲಹೆ ನೀಡಲಾಗಿದೆ.

ವಾರದ ಹಿಂದೆಯೇ ಅವರು ಚಿಕಿತ್ಸೆ ಪಡೆದಿದ್ದು, ಸಂಪೂರ್ಣ ಸುಧಾರಿಸದ ಹಿನ್ನಲೆಯಲ್ಲಿ ಮತ್ತೆ ಆಸ್ಪತ್ರೆಗೆ ಆಗಮಿಸಿ ವೈದ್ಯರ ಸಲಹೆ ಪಡೆದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ ಎಲ್ಲಾ ಸೌಲಭ್ಯ ಒದಗಿಸಿದೆ. ಜನ ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...