alex Certify
ಕನ್ನಡ ದುನಿಯಾ       Mobile App
       

Kannada Duniya

‘ವೇಣುಗೋಪಾಲ್ ಸತ್ಯಾಸತ್ಯತೆ ಕಾಂಗ್ರೆಸ್ ತಿಳಿಸಲಿ’

ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಆರೋಪದ ಬಗ್ಗೆ ಕಾಂಗ್ರೆಸ್ ಜನರ ಮುಂದೆ ಸತ್ಯಾಸತ್ಯತೆ ತಿಳಿಸಬೇಕಿದೆ ಎಂದು ರಾಜ್ಯ ಬಿ.ಜೆ.ಪಿ. ವಕ್ತಾರ ಎಸ್. ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

ಕೇರಳದಲ್ಲಿ ನಡೆದ ಸೋಲಾರ್ ಹಗರಣದಲ್ಲಿ ಆರೋಪಿಯಾಗಿರುವ ಸರಿತಾ ನಾಯರ್ ಅವರು, ವೇಣುಗೋಪಾಲ್ ವಿರುದ್ಧ ಆರೋಪ ಮಾಡಿದ್ದು, ತನಿಖೆ ನಡೆಸಲಾಗಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್, ಬಹುಕೋಟಿ ಸೋಲಾರ್ ಹಗರಣದಲ್ಲಿ ಕೇರಳ ಸರ್ಕಾರ ವೇಣುಗೋಪಾಲ್ ಅವರ ವಿರುದ್ಧ ಆರೋಪ ಪಟ್ಟಿ ದಾಖಲಿಸಲು ಮುಂದಾಗಿದೆ. ಅಲ್ಲದೇ, ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬಿ.ಜೆ.ಪಿ.ಯವರನ್ನು ಟೀಕಿಸಲು ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದ್ದಾರೆ.

ವೇಣುಗೋಪಾಲ್ ಕುರಿತಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕಪ್ಪು ಹಣಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಪ್ರಯತ್ನ ವಿಫಲವಾಗಿದೆಯೇ..?

    View Results

    Loading ... Loading ...