alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ರಾಯಣ್ಣ ಬ್ರಿಗೇಡ್ ಸಭೆ ನಡೆಸಿದ ಈಶ್ವರಪ್ಪ

kse-kse

ಬೆಂಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಇಂದು ಮತ್ತೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಭೆಯನ್ನು ನಡೆಸಿದ್ದಾರೆ.

ಬೆಂಗಳೂರಿನ ಶಾಸಕರ ಭವನದಲ್ಲಿ ಅವರು ಸಭೆ ನಡೆಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಹಿಂದುಳಿದವರಿಗೆ ಸೂಕ್ತ ನ್ಯಾಯ ಸಿಕ್ಕಿಲ್ಲ. ಈ ಹಿನ್ನಲೆಯಲ್ಲಿ ಸಂಘಟನೆಯನ್ನು ಬಲಪಡಿಸುವ ಜೊತೆಗೆ ಹಿಂದುಳಿದವರ ಏಳಿಗೆಗೆ ಶ್ರಮಿಸಲಾಗುವುದು ಎಂದು ಹೇಳಿದ್ದಾರೆ. ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪ ನಡುವೆ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಯಿಂದ ಈಶ್ವರಪ್ಪ ದೂರ ಉಳಿಯಲಿದ್ದಾರೆ ಎನ್ನಲಾಗಿತ್ತು.

ಯಡಿಯೂರಪ್ಪ ಮತ್ತು ಈಶ್ವರಪ್ಪ ಮಾತುಕತೆ ನಡೆಸಿದ ನಂತರ, ಕೆಲದಿನಗಳಿಂದ ಬ್ರಿಗೇಡ್ ಸಭೆಗಳು ನಡೆದಿರಲಿಲ್ಲ. ಈಶ್ವರಪ್ಪ ಇಂದು ಮತ್ತೆ ಸಭೆ ನಡೆಸುವ ಮೂಲಕ, ಯಡಿಯೂರಪ್ಪನವರಿಗೆ ಸಂದೇಶ ರವಾನಿಸಿದ್ದಾರೆ.

ಬ್ರಿಗೇಡ್ ಚಟುವಟಿಕೆಗಳನ್ನು ಚುರುಕುಗೊಳಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯಲ್ಲಿ ಸಂಘಟನೆಯ ಪ್ರಮುಖ ಮುಕುಡಪ್ಪ ಮೊದಲಾದವರು ಭಾಗವಹಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...