alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಾಂಗ್ರೆಸ್ ನಿಂದ ಕುತಂತ್ರದ ರಾಜಕಾರಣ’

smg-kse

ಶಿವಮೊಗ್ಗ: ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನ ನೇಮಕಾತಿ ಕುರಿತಂತೆ ಗೊಂದಲ ಏರ್ಪಟ್ಟಿರುವುದರಿಂದ ಅದನ್ನು ಬಗೆಹರಿಸಿಕೊಳ್ಳಲು ಕಾಂಗ್ರೆಸ್ ಕುತಂತ್ರದ ರಾಜಕಾರಣ ಮಾಡುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. ಹೆಚ್. ಶಂಕರಮೂರ್ತಿ ಅವರನ್ನು ಸಭಾಪತಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್ ಇಲ್ಲಸಲ್ಲದ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಸಭಾಪತಿ ಸ್ಥಾನದ ಮೇಲೆ ಕಾಂಗ್ರೆಸ್ ಕಣ್ಣು ಬಿದ್ದಿದೆ. ಕೆ.ಪಿ.ಸಿ.ಸಿ. ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಎಸ್. ಆರ್. ಪಾಟೀಲ್ ಅವರನ್ನು ಸಭಾಪತಿಯನ್ನಾಗಿ ಆಯ್ಕೆ ಮಾಡಿ, ಕಾಂಗ್ರೆಸ್ ನಲ್ಲಿ ಎದ್ದಿರುವ ಗೊಂದಲ ನಿವಾರಣೆ ಮಾಡಿಕೊಳ್ಳಲು ಈ ರೀತಿ ತಂತ್ರ ಮಾಡತೊಡಗಿದೆ ಎಂದು ಆರೋಪಿಸಿದ್ದಾರೆ.

ಸಭಾಪತಿಯಾಗಿ ಡಿ. ಹೆಚ್. ಶಂಕರಮೂರ್ತಿ ಅವರು ಪಕ್ಷಾತೀತವಾಗಿ ಒಳ್ಳೆಯ ಕೆಲಸ ಮಾಡುತ್ತಿದ್ಧಾರೆ. ಕಾಂಗ್ರೆಸ್ ಪಕ್ಷದ ಪರಿಷತ್ ಸದಸ್ಯರೇ ಇದನ್ನು ಒಪ್ಪಿಕೊಂಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್. ಡಿ. ಕುಮಾರಸ್ವಾಮಿ ಬಳಿ ಈ ಕುರಿತಂತೆ ತಾವು ವೈಯಕ್ತಿಕವಾಗಿ ಮಾತನಾಡಿದ್ದೇನೆ.  ಡಿ.ಹೆಚ್.  ಶಂಕರಮೂರ್ತಿ  ಅವರಿಗೆ ಬೆಂಬಲ ನೀಡುವುದಾಗಿ ಅವರು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಕುತಂತ್ರಕ್ಕೆ ಯಶಸ್ಸು ಸಿಗುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...