alex Certify
ಕನ್ನಡ ದುನಿಯಾ       Mobile App
       

Kannada Duniya

‘ನೋಟು ಎಣಿಸುವ ಯಂತ್ರವಿದೆ, ಮುದ್ರಣ ಯಂತ್ರವಲ್ಲ..!’

kse-nor

ಕಾರವಾರ: ನಾನು ವ್ಯಾಪಾರಸ್ಥ. ನನ್ನ ಮನೆಯಲ್ಲಿ ನೋಟು ಎಣಿಸುವ ಯಂತ್ರ ಇಟ್ಟುಕೊಂಡಿದ್ದೇನೆ. ಕಾಂಗ್ರೆಸ್ ನಾಯಕರ ಮನೆಯಲ್ಲಿ ನೋಟು ಮುದ್ರಣ ಯಂತ್ರ ಇರಬಹುದು ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪದಿಂದ ಯಡಿಯೂರಪ್ಪ ಮುಕ್ತರಾಗಿದ್ದಾರೆ. ಕಾಂಗ್ರೆಸ್ ನವರು ಆರೋಪದಲ್ಲಿ ಸಿಲುಕಿದ್ದಾರೆ. ಇದನ್ನು ಮರೆ ಮಾಚಲು ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಐ.ಟಿ. ದಾಳಿ ನಡೆದ ಸಚಿವ ಡಿ.ಕೆ. ಶಿವಕುಮಾರ್ ಮನೆಯಲ್ಲಿ ಬೇನಾಮಿ ಆಸ್ತಿ ದಾಖಲೆ ಸಿಕ್ಕಿವೆ. ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ನಾನು ಮತ್ತು ಯಡಿಯೂರಪ್ಪ ರಾಮ, ಲಕ್ಷ್ಮಣರಂತೆ ಇದ್ದೇವೆ. ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯಗಳಿಲ್ಲ. ಕೆಲವರು ಅನಗತ್ಯ ಗೊಂದಲ ಮೂಡಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ವರಿಷ್ಠರು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದ್ದಾರೆ ಎಂದ ಅವರು, ಇಂದಿರಾ ಕ್ಯಾಂಟೀನ್ ಒಳ್ಳೆಯ ಯೋಜನೆಯಾಗಿದ್ದು, ಪ್ರಚಾರಕ್ಕೆ ಸೀಮಿತವಾಗದೇ ಬಡವರ್ಗದವರಿಗೆ ಅನುಕೂಲವಾಗಲಿ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...