alex Certify
ಕನ್ನಡ ದುನಿಯಾ       Mobile App
       

Kannada Duniya

ಊದುವುದು ಬಿಟ್ಟು ಬಾರಿಸುವುದು ಬಂದಂತೆ: ಈಶ್ವರಪ್ಪ

k s eshwarappaಶಿವಮೊಗ್ಗ: ರಾಜ್ಯ ಸರ್ಕಾರ ಜನಪರ ಕೆಲಸಗಳನ್ನು ಮಾಡುತ್ತಿಲ್ಲ. ನಿದ್ರಾವಸ್ಥೆಯಲ್ಲಿದೆ ಎಂದು ತಮ್ಮ ಎಂದಿನ ಶೈಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ. ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ವಲಂತ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳದೇ ವಾಚ್ ವಿಚಾರದಲ್ಲೇ ಮುಳುಗಿದ್ದಾರೆ ಎಂದಿದ್ದಾರೆ.

ನಾಯಕತ್ವ ಬದಲಾದರೆ ಆಡಳಿತ ಚುರುಕಾಗಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಊದುವುದು ಬಿಟ್ಟು ಬಾರಿಸುವುದನ್ನು ಹಿಡಿದುಕೊಂಡಂತಾಗುತ್ತದೆ ಎಂದಿದ್ದಾರೆ. ರಾಜ್ಯದ ಜನತೆ ಕೇವಲ ಮುಖ್ಯಮಂತ್ರಿ ವಾಚ್ ಬಗ್ಗೆ ಮಾತನಾಡುವ ಜೊತೆಗೆ ಅವರನ್ನೂ ವಾಚ್ ಮಾಡುತ್ತಿರುತ್ತಾರೆ ಎಂಬುದು ಗಮನದಲ್ಲಿರಲಿ ಎಂದು ಹೇಳಿದ್ದಾರೆ.

ವಾಚ್ ಹಗರಣದಿಂದಾಗಿ ಕಾಂಗ್ರೆಸ್ ಹೈಕಮಾಂಡ್ ಸಿದ್ಧರಾಮಯ್ಯರವರ ನಾಯಕತ್ವವನ್ನು ಬದಲಾಯಿಸುತ್ತದೆ ಎಂಬ ವದಂತಿಗೆ ಪ್ರತಿಕ್ರಿಯಿಸಿ, ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ? ಇಲ್ಲವೋ ಗೊತ್ತಿಲ್ಲ. ಆದರೆ ರಾಜ್ಯದ ಜನತೆಗೆ ಕುಡಿಯುವ ನೀರನ್ನು ಒದಗಿಸುವ ಕಾರ್ಯ ಸರ್ಕಾರ ಮಾಡಬೇಕೆಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...