alex Certify
ಕನ್ನಡ ದುನಿಯಾ       Mobile App
       

Kannada Duniya

ಉಪೇಂದ್ರ ಕುರಿತಾಗಿ ಹೀಗೆಂದರು ಈಶ್ವರಪ್ಪ

ks-e-kse-d

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹೊಸ ರಾಜಕೀಯ ಪಕ್ಷದ ಕುರಿತಾಗಿ ಅನೇಕರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಉಪೇಂದ್ರ ಬಿ.ಜೆ.ಪಿ.ಗೆ ಬರುವುದಾದರೆ, ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಹೊಸ ಪಕ್ಷವನ್ನು ಸ್ಥಾಪಿಸಲು ಉಪೇಂದ್ರ ಸ್ವತಂತ್ರರಿದ್ದಾರೆ. ಯಾರೂ ಬೇಕಾದರೂ ಪಕ್ಷವನ್ನು ಸ್ಥಾಪಿಸಬಹುದು. ಹೊಸ ಪಕ್ಷವನ್ನು ಸ್ಥಾಪಿಸುವುದಕ್ಕಿಂತ ತಮ್ಮ ಐಡಿಯಾಲಜಿಗೆ ಸೂಕ್ತವಾದ ಪಕ್ಷವನ್ನು ಅವರು ಸೇರಲಿ ಎಂದು ಸಲಹೆ ನೀಡಿದ್ದಾರೆ.

ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಪಕ್ಷದ ಸಂಘಟನೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...