alex Certify
ಕನ್ನಡ ದುನಿಯಾ       Mobile App
       

Kannada Duniya

‘ಜಾಧವ್ ನೆಂಟನೂ ಅಲ್ಲ, ಭಂಟನೂ ಅಲ್ಲ’

kagodu timmappa 45

ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರ ತಾಯಿಯ ಹೆಸರಿಗೆ ಸರ್ಕಾರಿ ಜಮೀನು ಪೋಡಿ ಮಾಡಿಕೊಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ ಕುರಿತಂತೆ ಕಂದಾಯ ಇಲಾಖೆಯಿಂದ ವರದಿ ಪಡೆಯಲಾಗಿದೆ.

ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಈಗಾಗಲೇ ತಿಳಿಸಿದ್ದಾರೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಕೂಡ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ಅರವಿಂದ್ ಜಾಧವ್ ಅವರು ನನ್ನ ನೆಂಟರೇನಲ್ಲ, ಬಂಧು ಬಳಗದವರಲ್ಲ. ಅವರು ತಪ್ಪು ಮಾಡಿದ್ದಾರೆಂದು ವರದಿಯಲ್ಲಿ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವುದಿಲ್ಲ ಎಂದು ಹೇಳಿದ್ದಾರೆ.

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕಾಗೋಡು ತಿಮ್ಮಪ್ಪ, ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೂಡಲೇ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...