alex Certify
ಕನ್ನಡ ದುನಿಯಾ       Mobile App
       

Kannada Duniya

‘ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ನೇಮಕಾತಿ’

kagodu-timmappa spkr

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಶೀಘ್ರವೇ ನೇಮಕಾತಿ ನಡೆಸಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 115 ತಹಶೀಲ್ದಾರ್ ನೇಮಕಾತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.

ಇಲಾಖೆಯಲ್ಲಿ ಖಾಲಿ ಇರುವ ಎಫ್.ಡಿ.ಎ., ಎಸ್.ಡಿ.ಎ.ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು. ಇದರೊಂದಿಗೆ 1300 ಸರ್ವೇಯರ್ ಹಾಗೂ 1500 ಗ್ರಾಮ ಲೆಕ್ಕಿಗರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡಿರುವ ಬಡವರಿಗೆ 6 ತಿಂಗಳ ಒಳಗೆ ಹಕ್ಕುಪತ್ರ ವಿತರಿಸಲಾಗುವುದು. ಈ ಬಗ್ಗೆ ಪ್ರಕ್ರಿಯೆ ನಡೆಯುತ್ತಿದೆ. ಗ್ರಾಮೀಣ ಭಾಗದ ಜಾಗಗಳಿಗೆ ಇನ್ನಷ್ಟು ಶುಲ್ಕ ಕಡಿಮೆ ಮಾಡುವ ಬಗ್ಗೆ ಹಾಗೂ ಪರಿಶಿಷ್ಟ, ಜಾತಿ/ ಪಂಗಡದವರಿಗೆ ಉಚಿತವಾಗಿ ಹಕ್ಕುಪತ್ರ ಕೊಡಲು ಮುಖ್ಯಮಂತ್ರಿ ಅವರಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದರೊಂದಿಗೆ ಬಗರ್ ಹುಕುಂ ಮತ್ತು ವಿಶೇಷ ಭೂ ಹಕ್ಕಿನ ಯೋಜನೆಯಡಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲಾಗುವುದು. ಕಾಲಮಿತಿಯೊಳಗೆ ಬಗರ್ ಹುಕುಂ ಸಮಿತಿ ಸಭೆ ಕರೆದು ಅರ್ಜಿ ವಿಲೇವಾರಿ ಮಾಡಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...