alex Certify
ಕನ್ನಡ ದುನಿಯಾ       Mobile App
       

Kannada Duniya

‘ಜನವರಿ ಅಂತ್ಯದೊಳಗೆ ನೂತನ ತಾಲೂಕು ರಚನೆ ಪೂರ್ಣ’

ಶಿವಮೊಗ್ಗ : ಹೊಸದಾಗಿ ಘೋಷಣೆಯಾಗಿರುವ 49 ತಾಲ್ಲೂಕುಗಳಿಗೆ ತಹಶೀಲ್ಧಾರರ ನೇಮಕ ಸೇರಿದಂತೆ ತಾಲೂಕು ರಚನೆ ಪ್ರಕ್ರಿಯೆಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಕಾರ್ಯ ಕೈಗೊಳ್ಳಲಾಗಿದೆ. ಶಿವಮೊಗ್ಗದಲ್ಲಿ ವೈಜ್ಞಾನಿಕ ಲಕ್ಷಣ ಕಂಡು ಬಂದಲ್ಲಿ ಮೋಡ ಬಿತ್ತನೆ ಕಾರ್ಯ ನಡೆಸಲಾಗುವುದು ಎಂದರು.

ಜಿಲ್ಲಾ ಯೋಜನಾ ಸಮಿತಿ ರಚನೆ ಸಂಬಂಧ ಇಂದು ಸಭೆ ನಡೆಸಲಾಗಿದೆ. ಯೋಜನೆ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತಿಳುವಳಿಕೆ ಮೂಡಿಸಬೇಕಿದೆ. ಈ ತಿಂಗಳ ಅಂತ್ಯದೊಳಗೆ ಜಿಲ್ಲೆಯ ಪ್ರತಿ ತಾಲೂಕಿನಲ್ಲೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಸೇರಿಸಿ ಕಾರ್ಯಾಗಾರ ಏರ್ಪಡಿಸಲಾಗುವುದು. ಯೋಜನೆಯ ಮೂಲ ಉದ್ಧೇಶ ತಿಳಿಸಲಾಗುವುದು ಎಂದು ಹೇಳಿದರು.

ಅಕ್ಟೋಬರ್ ತಿಂಗಳ ಅಂತ್ಯದ ವೇಳೆಗೆ ಯೋಜನೆ ಸಿದ್ದಪಡಿಸಿ ನವೆಂಬರ್ ನಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡುವ ಉದ್ದೇಶ ಹೊಂದಲಾಗಿದೆ. ಯೋಜನೆಯಂತೆ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಸಮಿತಿಗಳನ್ನು ಸದ್ಯದಲ್ಲೇ ರಚನೆ ಮಾಡಲಾಗುವುದು ಎಂದರು.

ತುಂಗಾ ಏತ ನೀರಾವರಿ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಬೇಕು. ಯೋಜನೆ ಕುರಿತು ತಾವು ವಿಶೇಷ ಆಸಕ್ತಿ ಹೊಂದಿದ್ಧೇನೆ. ಅಧಿಕಾರಿಗಳ ಬೆನ್ನುಹತ್ತಿದ್ದೇನೆ. ಯೋಜನೆ ಪೂರ್ಣಗೊಂಡರೆ ಆ ಭಾಗದ ಸಾವಿರಾರು ರೈತರಿಗೆ ಅನುಕೂಲ ಆಗುತ್ತದೆ ಎಂಬ ಅರಿವು ನನಗಿದೆ. ಸದ್ಯದಲ್ಲೇ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.

ಭೂಮಿ ತಂತ್ರಾಂಶದ ಮೂಲಕ ಬೆಳೆವಿಮೆ ಪರಿಹಾರ ಹಣವನ್ನು ರೈತರ ಖಾತೆಗೆ ನೇರವಾಗಿ ಸಂದಾಯ ಮಾಡಲಾಗುತ್ತಿದೆ. ಸರಿಸುಮಾರು 26 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಬಿಡುಗಡೆಯಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...