alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ರೌಡಿಶೀಟರ್ ಮೇಲೆ ಫೈರಿಂಗ್

ಕಲಬುರಗಿ: ಪೊಲೀಸರ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ.

ಕಲಬುರಗಿ ತಾಲ್ಲೂಕಿನ ತಾವರಗೇರಾ ಬಳಿ ಘಟನೆ ನಡೆದಿದೆ. ರೌಡಿಶೀಟರ್ ಯಶವಂತ್ ಬಂಧನಕ್ಕೆ ತೆರಳಿದ್ದ ಸಂದರ್ಭದಲ್ಲಿ ಆತ ಮಾರಕಾಸ್ತ್ರಗಳಿಂದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾನೆ.

ಪೇದೆಗಳಾದ ಕುಪೇಂದ್ರ, ಕುಶನ್ ಅವರಿಗೆ ಗಾಯಗಳಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಯಶವಂತ್ ಮೇಲೆ ಫೈರಿಂಗ್ ಮಾಡಿದ್ದಾರೆ. ಗ್ರಾಮೀಣ ಠಾಣೆ ಪಿ.ಎಸ್.ಐ. ಚಂದ್ರಶೇಖರ್ ತಿಗಡಿ ಫೈರಿಂಗ್ ಮಾಡಿದ್ದು, ಗಾಯಗೊಂಡಿರುವ ಯಶವಂತ್ ನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸೇರಿಸಲಾಗಿದೆ.

ಗಾಯಾಳು ಪೇದೆಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಯಶವಂತ್ ಮಧ್ಯಪ್ರದೇಶ, ಉತ್ತರ ಪ್ರದೇಶದಿಂದ ನಾಡ ಪಿಸ್ತೂಲ್ ಗಳನ್ನು ತಂದು ಮಾರಾಟ ಮಾಡ್ತಿದ್ದ. ಅಲ್ಲದೇ, ಹಲವು ಕೊಲೆ ಪ್ರಕಣಗಳಲ್ಲಿ ಭಾಗಿಯಾಗಿದ್ದ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಬೆಳಿಗ್ಗೆ ಆತನನ್ನು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಫೈರಿಂಗ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...