alex Certify ಕಲ್ಬುರ್ಗಿಯಲ್ಲಿ ಮೊಳಗಿದ ಗುಂಡಿನ ಸದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಬುರ್ಗಿಯಲ್ಲಿ ಮೊಳಗಿದ ಗುಂಡಿನ ಸದ್ದು

ಕಲ್ಬುರ್ಗಿ ಹೊರವಲಯದ ತಾಜಾ ಸುಲ್ತಾನಪುರ ಬಳಿ ದರೋಡೆ, ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತಾಜಾ ಸುಲ್ತಾನಪುರ ರೈಲ್ವೆ ಹಳಿ ಸಮೀಪ 22 ವರ್ಷದ ಮುಬೀನ್ ಮೇಲೆ ಕಲ್ಬುರ್ಗಿ ಗ್ರಾಮಾಂತರ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಎರಡು ದಿನಗಳ ಹಿಂದೆ ಸಂಪತ್ ಎಂಬವರ ಮನೆಯಲ್ಲಿ ಹಲ್ಲೆ ನಡೆಸಿ ದರೋಡೆ ಮಾಡಲಾಗಿತ್ತು. ಆರೋಪಿಯನ್ನು ಬಂಧಿಸಿದ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳ ಮಹಜರು ಮಾಡಲು ಹೋಗಿದ್ದ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಗಾಯಗೊಂಡಿರುವ ಮುಬೀನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...