alex Certify ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಮುಖಂಡನ ಕೊಲೆ ಆರೋಪಿ ಮೇಲೆ ಫೈರಿಂಗ್

ಕಲಬುರಗಿ: ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆ ಶಹಬಾದ ಪಟ್ಟಣದ ಬಳಿ ಗುಂಡಿನ ದಾಳಿ ನಡೆಸಲಾಗಿದೆ.

ಕೊಲೆ ಆರೋಪಿ ವಿಜಯ್ ಹಳ್ಳಿ ಮೇಲೆ ಗುಂಡಿನ ದಾಳಿ ನಡೆದಿದೆ. ಪಿಎಸ್ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ವೇಳೆ ಕಾಲಿಗೆ ಗುಂಡು ಹಾರಿಸಲಾಗಿದೆ. ಸಿಪಿಐ ಅವರು ವಿಜಯ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್ ಮುಖಂಡ ಗಿರೀಶ್ ಕಂಬಾನೂರು ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ವಿಜಯ್ ನನ್ನು ಬಂಧಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಗಿರೀಶ್ ಕೊಲೆ ನಡೆದಿತ್ತು.

ಮಾಹಿತಿ ಮೇರೆಗೆ ಪೊಲೀಸರು ವಿಜಯ್ ನನ್ನು ಬಂಧಿಸಲು ಹೋದಾಗ ಪಿಎಸ್ಐ ಮೇಲೆ ಹಲ್ಲೆ ಮಾಡಿ ಪರಾರಿಯಾಗಲೆತ್ನಿಸಿದ್ದು, ಈ ವೇಳೆ ಕಾಲಿಗೆ ಗುಂಡು ಹಾರಿಸಿ ಆತನನ್ನು ವಶಕ್ಕೆ ಪಡೆಯಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...