alex Certify
ಕನ್ನಡ ದುನಿಯಾ       Mobile App
       

Kannada Duniya

ಕಲಬುರಗಿಯಲ್ಲಿ ಬೆಳ್ಳಂಬೆಳಿಗ್ಗೆ ಫೈರಿಂಗ್

ಕಲಬುರಗಿ: ಕಲಬುರಗಿ ಹೊರವಲಯದ ಆಶ್ರಯ ಕಾಲೋನಿಯಲ್ಲಿ ಬೆಳ್ಳಂಬೆಳಿಗ್ಗೆ ಗುಂಡಿನ ಸದ್ದು ಮೊಳಗಿದೆ. ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಇಬ್ಬರು ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ದರೋಡೆಕೋರರಾದ ಶೇಖರ್ ಮತ್ತು ಅಜೀಂ ಅವರು ಗಾಯಗೊಂಡಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಜಿಲ್ಲೆಯ ವಿವಿಧೆಡೆ ದರೋಡೆ ನಡೆಸಿದ್ದ ಇವರ ಬಂಧನಕ್ಕೆ ತೆರಳಿದ್ದ ಸಂದರ್ಭದಲ್ಲಿ ಪೊಲೀಸರಾದ ಬಂದೇ ನವಾಜ್, ಭೀಮಾನಾಯ್ಕ ಅವರ ಮೇಲೆ ಹಲ್ಲೆ ಮಾಡಿದ್ದಾರೆ.

ಆಗ ಆತ್ಮರಕ್ಷಣೆಗಾಗಿ ಪಿ.ಎಸ್.ಐ. ಗಳಾದ ಪರಶುರಾಂ, ವಹೀದ್ ಕೊತ್ವಾಲ್ ಅವರು ಫೈರಿಂಗ್ ಮಾಡಿದ್ದಾರೆ. ದರೋಡೆಕೋರರನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳು ಪೊಲೀಸರನ್ನು ಕೂಡ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...