alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಂಬೆಳಿಗ್ಗೆ ಕುಖ್ಯಾತ ರೌಡಿಶೀಟರ್ ಮೇಲೆ ಫೈರಿಂಗ್

ಕಲಬುರಗಿ: ಕಲಬುರಗಿ ಹೊರ ವಲಯದ ಕೆಸರಟಗಿ ಗ್ರಾಮದ ಬಳಿ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿದ್ದಾರೆ.

ಇದ್ದಿಲು ಮಲ್ಲು ಅಲಿಯಾಸ್ ಮಲ್ಲಿಕಾರ್ಜುನನ ಮೇಲೆ ಫೈರಿಂಗ್ ಮಾಡಲಾಗಿದೆ. ಕೊಲೆ ಪ್ರಕರಣವೊಂದರ ಪ್ರಮುಖ ಆರೋಪಿಯಾಗಿದ್ದ ಮಲ್ಲಿಕಾರ್ಜುನ, ರೆಸಾರ್ಟ್ ನಲ್ಲಿ ತಂಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಬಂಧಿಸಲು ಮುಂದಾಗಿದ್ದಾರೆ.

ಈ ವೇಳೆ ಮಲ್ಲಿಕಾರ್ಜುನ ಪೊಲೀಸರ ಮೇಲೆ ಬಿಯರ್ ಬಾಟಲಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ಪೇದೆಗಳಾದ ಅನಿಲ್, ವಿಶ್ವನಾಥ್ ಅವರಿಗೆ ಗಾಯಗಳಾಗಿವೆ.

ಆಗ ವಿಶ್ವವಿದ್ಯಾಲಯ ಠಾಣೆ ಇನ್ಸ್ ಪೆಕ್ಟರ್ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಪೊಲೀಸರು ಹಾಗೂ ರೌಡಿಶೀಟರ್ ಮಲ್ಲಿಕಾರ್ಜುನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...