alex Certify
ಕನ್ನಡ ದುನಿಯಾ       Mobile App
       

Kannada Duniya

ಸೈಡ್ ಕೊಡದಿದ್ದಕ್ಕೆ ಹೀಗೆ ಮಾಡಿದ್ದಾರೆ ನೋಡಿ

alanda-dd

ಕಲಬುರಗಿ: ಬೈಕ್ ಗೆ ಸೈಡ್ ಕೊಡದಿದ್ದ ಕಾರಣಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.

ಕಲಬುರಗಿ ಜಿಲ್ಲೆ ಆಳಂದದ ದರ್ಗಾ ಸರ್ಕಲ್ ನಲ್ಲಿ ಚಾಲಕ ಶ್ರೀಶೈಲ ಮಾಡ್ಯಾಳ್, ನಿರ್ವಾಹಕ ಕರಿಬಸಯ್ಯ ಅವರ ಮೇಲೆ ಹಲ್ಲೆ ಮಾಡಲಾಗಿದೆ.

ಸೈಡ್ ಕೊಟ್ಟಿಲ್ಲ ಎಂದು 8 ಮಂದಿ ಯುವಕರು ಚಾಲಕ, ನಿರ್ವಾಹಕನನ್ನು ಅಟ್ಟಾಡಿಸಿ ಹೊಡೆದಿದ್ದಾರೆ. ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಆಳಂದ ಡಿಪೋ ಚಾಲಕರು, ನಿರ್ವಾಹಕರು ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಹಲ್ಲೆ ನಡೆಸಿದ ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...