alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ಕಾರಣಕ್ಕೆ ನಡೆದಿದೆ ದುರಂತ…!

ಕಲಬುರಗಿ: ಮೊಬೈಲ್ ಜಾಸ್ತಿ ನೋಡಬೇಡ ಎಂದು ತಾಯಿ ಬುದ್ಧಿಮಾತು ಹೇಳಿದ್ದಕ್ಕೆ, ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಯುವತಿ ಮುಂದಾಗಿದ್ದು, ಆದರೆ, ಆಕೆಯ ಬಲಗಾಲು ತುಂಡಾಗಿದೆ.

ಕಲಬುರಗಿ ಪಿ.ಡಬ್ಲ್ಯೂ.ಡಿ. ಕ್ವಾಟ್ರಸ್ ನಿವಾಸಿಯಾಗಿರುವ 19 ವರ್ಷದ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಯುವತಿಗೆ ಮನೆಯಲ್ಲಿ ಬೈದಿದ್ದರಿಂದ ಮನನೊಂದು ಆತ್ಮಹತ್ಯೆಗೆ ನಿರ್ಧರಿಸಿದ್ದಾಳೆ.

ಕಲಬುರಗಿ ಕೋರಂಟಿ ಹನುಮಾನ್ ದೇವಾಲಯದ ಬಳಿ ವೇಗವಾಗಿ ಚಲಿಸುತ್ತಿದ್ದ ದಾದರ್ –ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ತಲೆ ಕೊಡಲು ಮುಂದಾಗಿದ್ದಾಳೆ.

ಈಕೆಯನ್ನು ಗಮನಿಸಿದ ಚಾಲಕ ರೈಲಿನ ವೇಗವನ್ನು ಕಡಿಮೆ ಮಾಡಿದ್ದಾರೆ. ಆದರೆ, ಯುವತಿ ಪ್ರಾಣ ಉಳಿದರೂ, ಕಾಲು ತುಂಡಾಗಿದೆ. ಯುವತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ವಾಡಿ ರೈಲ್ವೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...