alex Certify
ಕನ್ನಡ ದುನಿಯಾ       Mobile App
       

Kannada Duniya

KPSC ಪರೀಕ್ಷೆ ಅಕ್ರಮ: ತನಿಖೆ ನೆಪದಲ್ಲಿ ಸುಲಿಗೆಗಿಳಿದವರು ಸಸ್ಪೆಂಡ್

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ(ಕೆ.ಪಿ.ಎಸ್.ಸಿ.)ಯಿಂದ ನಡೆಸಲಾದ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ವಿಚಾರಣೆ ನೆಪದಲ್ಲಿ ಪೊಲೀಸರು ಹಣ ಸುಲಿಗೆ ಮಾಡಿದ್ದಾರೆ.

ಹೀಗೆ ಹಣ ಸುಲಿಗೆ ಮಾಡಿದ ಇಬ್ಬರು ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಕುಮಾರ್ ಸಸ್ಪೆಂಡ್ ಮಾಡಿದ್ದಾರೆ. ಕಲಬರಗಿ ಅಶೋಕನಗರ ಠಾಣೆಯ ರೈಟರ್ ನೆಹರು ಸಿಂಗ್ ಮತ್ತು ಪೊಲೀಸ್ ಮಲ್ಲಿಕಾರ್ಜುನ್ ಅವರನ್ನು ಅಮಾನತು ಮಾಡಲಾಗಿದೆ.

ಕೆ.ಪಿ.ಎಸ್.ಸಿ. ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಹಲವರನ್ನು ವಿಚಾರಣೆಗೆ ಒಳಪಡಿಸಲು ಪೊಲೀಸರು ಮುಂದಾಗಿದ್ದಾರೆ. ಇವರಿಬ್ಬರು ಕೆಲವು ಅಭ್ಯರ್ಥಿಗಳಿಗೆ ಅಕ್ರಮ ಎಸಗಿರುವುದಾಗಿ ಬೆದರಿಸಿದ್ದು, ಅವರ ಬಳಿ ಹಣ ಪಡೆದು ವಿಚಾರಣೆ ಪಟ್ಟಿಯಿಂದ ಹೆಸರು ಕೈಬಿಡುವುದಾಗಿ ತಿಳಿಸಿದ್ದಾರೆ.

ಅಶೋಕನಗರ ಠಾಣೆಯ ಪೊಲೀಸ್ ಮತ್ತು ರೈಟರ್ ಅಭ್ಯರ್ಥಿಗಳನ್ನು ಭೇಟಿ ಮಾಡಿ ಹಣ ಪಡೆದುಕೊಂಡಿರುವುದು ಗೊತ್ತಾಗುತ್ತಿದ್ದಂತೆ ಅಮಾನತು ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...