alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಕಾರ್ಯಕಾರಿಣಿಯಲ್ಲಿ ಗದ್ದಲ

bjp-kala-nire

ಕಲಬುರಗಿ: ನಗರದಲ್ಲಿ ನಡೆಯುತ್ತಿರುವ ಬಿ.ಜೆ.ಪಿ. ಕಾರ್ಯಕಾರಿಣಿಯಲ್ಲಿ ಗದ್ದಲ ಉಂಟಾಗಿ, ಸಭೆಯಲ್ಲಿ ಕೆಲಕಾಲ ಗೊಂದಲ ಮೂಡಿತ್ತು.

ಸಭೆ ನಡೆಯುತ್ತಿದ್ದ ಸ್ಥಳದಲ್ಲಿ ಕೆಲವರು ನ್ಯಾಯ ಬೇಕು ಎಂದು ಗದ್ದಲ ನಡೆಸಿದ್ದು, ಯಾರು ಏನು ಮಾತನಾಡುತ್ತಿದ್ದಾರೆ ಎಂಬುದೇ ತಿಳಿಯದಾಗಿದೆ.

ಬಳಿಕ ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರ ರಾವ್, ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಗದ್ದಲ ಮಾಡುತ್ತಿದ್ದವರನ್ನು ಸಮಾಧಾನಪಡಿಸಿದ್ದಾರೆ.

ಪಕ್ಷದಲ್ಲಿ ನಾಯಕರೇ ಆರೋಪ, ಪ್ರತ್ಯಾರೋಪದಲ್ಲಿ ತೊಡಗಿದ್ದು, ಗೊಂದಲಗಳಿಗೆ ತೆರೆ ಎಳೆಯಬೇಕೆಂದು ಸಭೆಯಲ್ಲಿ ಕೆಲವರು ಒತ್ತಾಯಿಸಿದ್ದಾರೆ. ಅವರಿಗೆ ತಿಳಿ ಹೇಳಿ ಸಭೆಯನ್ನು ಮುಂದುವರೆಸಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕಾರಿಣಿಯಲ್ಲಿ ಭಾಗವಹಿಸಿದ್ದ ಪಕ್ಷದ ರಾಷ್ಟ್ರೀಯ ಎಸ್.ಟಿ. ಮೋರ್ಚಾ ಸದಸ್ಯ ವೆಂಕಟೇಶ್ ಮೌರ್ಯ ಅವರನ್ನು ಬಂಧಿಸಲಾಗಿದೆ.

ಆದರೆ, ಇದನ್ನು ಅಲ್ಲಗಳೆದ ವೆಂಕಟೇಶ್ ಮೌರ್ಯ, ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಉಪ್ಪಾರಪೇಟೆ ಠಾಣೆ ಪೊಲೀಸರು ಸೂಚಿಸಿದ್ದು, ಅದರಂತೆ ಹಾಜರಾಗಲಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಯಕಾರಿಣಿ ಸಭೆಯ ಬಳಿಕ ಪಕ್ಷದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದ ಮುರುಳೀಧರ ರಾವ್, ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...