alex Certify
ಕನ್ನಡ ದುನಿಯಾ       Mobile App
       

Kannada Duniya

ಕಂಬಳ ಪ್ರಿಯರಿಗೆ ಸದ್ಯಕ್ಕಿಲ್ಲ ರಿಲೀಫ್

kambala

ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಮೇಲೆ ಹೇರಿರುವ ನಿಷೇಧ ತೆರವುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಅಷ್ಟೇ ಅಲ್ಲ ವಿಚಾರಣೆಯನ್ನು ಎರಡು ವಾರಗಳ ಕಾಲ ಮುಂದೂಡಿದೆ. ಕಂಬಳದ ಮೇಲೆ ವಿಧಿಸಿರೋ ನಿಷೇಧ ತೆರವು ಮಾಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇವತ್ತು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅರ್ಜಿ ವಿಚಾರಣೆ ನಡೆಸಿದ್ರು.

ಜಲ್ಲಿಕಟ್ಟು ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ಇನ್ನೂ ಆದೇಶ ನೀಡಿಲ್ಲ, ಹಾಗಾಗಿ ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕವೇ ಕಂಬಳ ನಿಷೇಧ ವಿವಾದದ ಬಗ್ಗೆ ಆದೇಶ ನೀಡಲು ಹೈಕೋರ್ಟ್ ತೀರ್ಮಾನಿಸಿದೆ. ಸುಪ್ರೀಂ ತೀರ್ಪು ಹೊರಬೀಳುವವರೆಗೂ ಕಾದು ನೋಡುವಂತೆ ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಜಲ್ಲಿಕಟ್ಟು ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದಲ್ಲಿ ಕಂಬಳ ಪ್ರಿಯರು ಹೋರಾಟ ಆರಂಭಿಸಿದ್ದರು. ಕಂಬಳದ ಮೇಲೆ ಹೇರಿರುವ ನಿಷೇಧ ತೆರವಿಗೆ ಒತ್ತಾಯಿಸಿ ರಾಜ್ಯದ ವಿವಿಧೆಡೆ ಪ್ರತಿಭಟನೆ ಕೂಡ ನಡೆಯುತ್ತಿದೆ. ಈ ಹಿಂದೆ ರಾಜ್ಯ ಸರ್ಕಾರ ಕೂಡ ಗ್ರಾಮೀಣ ಕ್ರೀಡೆ ಕಂಬಳಕ್ಕೆ ಬೆಂಬಲ ವ್ಯಕ್ತಪಡಿಸಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಜಲ್ಲಿಕಟ್ಟು ವಿವಾದ ಸಂಬಂಧ ವಿಚಾರಣೆ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...