alex Certify
ಕನ್ನಡ ದುನಿಯಾ       Mobile App
       

Kannada Duniya

ನಟ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಮೈಸೂರು: ಮೈಸೂರಿನಲ್ಲಿ ನಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸ್ನೇಹಿತ ಆಂಟನಿ ರಾಯ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ನಟ ದರ್ಶನ್ ಕಾನೂನು ಪ್ರಕ್ರಿಯೆಯಿಂದ ಸೇಫ್ ಆಗಿದ್ದಾರೆ.

ನಿನ್ನೆ ನಸುಕಿನ ಜಾವ ಮೈಸೂರಿನ ರಿಂಗ್ ರಸ್ತೆ ಜಂಕ್ಷನ್ ತಿರುವಿನಲ್ಲಿ ಸಂಭವಿಸಿದ ದರ್ಶನ್ ಕಾರು ಅಪಘಾತಕ್ಕೆ ಕಾರನ್ನು ಚಲಾಯಿಸುತ್ತಿದ್ದ ಆಂಟನಿ ರಾಯ್ ಅವರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ದರ್ಶನ್ ಖಾಸಗಿ ಗನ್ ಮ್ಯಾನ್, ಚಾಲಕ ಲಕ್ಷ್ಮಣ್ ವಿವಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಹಿನ್ನಲೆಯಲ್ಲಿ ಆಂಟನಿ ರಾಯ್ ಮಾತ್ರ ಪ್ರಕರಣದಲ್ಲಿ ಏಕೈಕ ಆರೋಪಿಯಾಗಿದ್ದು, ಅವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ವಿವಿ ಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಂಟನಿ ರಾಯ್ ವಿರುದ್ಧ ಐಪಿಸಿ ಸೆಕ್ಷನ್ 279, 337, 338 ಅಡಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...