alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ರಾಜ್ಯೋತ್ಸವದಂದು ವಿಡಿಯೋ ಸಂದೇಶದ ಮೂಲಕ ಶುಭ ಕೋರಿದ ಸಿಎಂ

ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಕರ್ನಾಟಕ ಸೇರಿದಂತೆ ವಿಶ್ವದೆಲ್ಲೆಡೆ ನೆಲೆಸಿರುವ ಕನ್ನಡಿಗರು ಇದನ್ನು ಸಡಗರದಿಂದ ಆಚರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯೋತ್ಸವದಂದು ಕನ್ನಡಿಗರಿಗೆ ಶುಭಕೋರಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿದಂತೆ ಹಲವು ಗಣ್ಯರು ಸಂದೇಶ ಕಳುಹಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಹ ವಿಡಿಯೋ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ.

ತಮ್ಮ ವಿಡಿಯೋ ಸಂದೇಶದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ‘ನಾಡಿನ ಸಮಸ್ತ ನಾಗರಿಕ ಬಂಧುಗಳಿಗೆ 63ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿ ಇರುವ ನಾಡು ನಮ್ಮದು. ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ ಶಾಂತಿ, ಸಹ ಬಾಳ್ವೆ, ಸೌಹಾರ್ದದಿಂದ ನಳನಳಿಸುವ ನಾಡು ಇದು. ಬನ್ನಿ ನಾಡುನುಡಿಯನ್ನು ಗೌರವಿಸೋಣ, ಏಕೀಕರಣಕ್ಕಾಗಿ ದುಡಿದವರನ್ನು ಸ್ಮರಿಸೋಣ, ಸಮೃದ್ಧ ಕರ್ನಾಟಕವನ್ನು ಕಟ್ಟೋಣ. ತಾಯಿ ಭುವನೇಶ್ವರಿ ಕೃಪೆ ಸದಾ ನಮ್ಮ ಮೇಲೆ ಇರಲಿ ಎಂದು ಹಾರೈಸುತ್ತೇನೆ ಜೈ ಹಿಂದ್ ಜೈ ಕರ್ನಾಟಕ’ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...